ಅನಾರೋಗ್ಯದಿಂದ ಬಳಲುತ್ತಿದ್ದ, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಮಾಧ್ಯಮಗಳ ವರದಿ ಮಾಡಿದ್ದವು. ಜೊತೆಗೆ ಅವರಿಗೆ ಚಿಕಿತ್ಸೆಯನ್ನು ವೈದ್ಯರು ಐಸಿಯುವಿನಲ್ಲೇ ಮುಂದುವರೆಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ತಮಿಳು ನಾಡಿನ ಡಿಎಂಡಿಕೆ ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದವು. ಕ್ಯಾಪ್ಟನ್ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು.ಆದರೆ, ಮನೆಗೆ ಬಾರದೇ, ಬಾರದ ಲೋಕಕ್ಕೆ ಹೋಗಿದ್ಧಾರೆ ಕ್ಯಾಪ್ಟನ್ ವಿಜಯಕಾಂತ್.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…