Featured

ತಮ್ಮದು ಸೂಟ್ ಬೂಟ್ ಸರ್ಕಾರ ಎನ್ನುವುದನ್ನು ಮೋದಿ ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ : ಸಿದ್ದರಾಮಯ್ಯ – Vishwanews24

56 ಎದೆಯಳತೆಯ ಪ್ರಧಾನಿ ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ..

ತಮ್ಮದು ಸೂಟ್ ಬೂಟ್ ಸರ್ಕಾರ ಎನ್ನುವುದನ್ನು ಮೋದಿ ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ..

ಬೆಂಗಳೂರು: ಬಡವರ ಹೊಟ್ಟೆಗೆ ಒದೆಯುವುದೇ ಅಚ್ಚೇ ದಿನ್ ಎಂದು ತಿಳಿದುಕೊಂಡಿರುವ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಊಟದ ತಟ್ಟೆಯಲ್ಲಿನ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆ, ಮೀನು, ಮಾಂಸ, ಮಂಡಕ್ಕಿ ಎಲ್ಲವನ್ನೂ ಕಿತ್ತುಕೊಳ್ಳಲು ಹೊರಟಿರುವುದು ಬಡವರ ಹತ್ಯೆಗೆ ಸಮನಾದ ಪಾಪ ಕರ್ಮ ಎಂದು ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ತರಕಾರಿ ಮತ್ತಿತರ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿದಿದೆ. ಈ ಹೊತ್ತಿನಲ್ಲಿ ಬಡವರ ನೆರವಿಗೆ ಬರಬೇಕಾಗಿರುವ ಕೇಂದ್ರ ಸರ್ಕಾರ ಅವರನ್ನು ಉಪವಾಸ ಬೀಳಿಸಿ, ಸಾಯಿಸಲು ಹೊರಟಿದೆ. ಇಂತಹ ಕ್ರೌರ್ಯ ಫ್ಯಾಸಿಸ್ಟ್ ಮನಸ್ಸುಗಳಿಗೆ ಮಾತ್ರ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಬ್ರ್ಯಾಂಡೆಡ್ ಅಲ್ಲದ ಪ್ಯಾಕ್ ಮಾಡಲಾಗಿರುವ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆಯಂತಹ ದಿನಬಳಕೆಯ ವಸ್ತುಗಳ ಮೇಲೆ ನರೇಂದ್ರ ಮೋದಿ ಸರ್ಕಾರ ಜಿಎಸ್‌ಟಿ ಹೇರಿರುವುದು ಬ್ರ್ಯಾಂಡೆಡ್ ವಸ್ತುಗಳ ಕಂಪೆನಿಗಳ ಒತ್ತಡಕ್ಕೆ ಮಣಿದು ಎನ್ನುವುದು ಸ್ಪಷ್ಟ. ತಮ್ಮದು ಸೂಟ್ ಬೂಟ್ ಸರ್ಕಾರ ಎನ್ನುವುದನ್ನು ನರೇಂದ್ರ ಮೋದಿ ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತೆರಿಗೆ ವಂಚನೆ ಮಾಡಿ, ಬ್ಯಾಂಕ್ ಮುಳುಗಿಸಿ ಓಡಿಹೋಗಿರುವ ಮೋದಿ, ಮಲ್ಯಗಳು ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಅವರನ್ನು ಎಳೆದುಕೊಂಡು ಬಂದು, ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಎದೆಯಳತೆಯ ಪ್ರಧಾನಿಗಳು ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ ಎಂದಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಈ ‘ತೆರಿಗೆ ಭಯೋತ್ಪಾದನೆಗೆ ಬಲಿಯಾಗಿರುವುದು ವಿರೋಧಪಕ್ಷಗಳ ಮತದಾರರು ಮಾತ್ರವಲ್ಲ, ಅಚ್ಚೇ ದಿನಗಳ ನಿರೀಕ್ಷೆಯಿಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿದ್ದ ಬಿಜೆಪಿಯ ಮತದಾರರಿಗೂ ಇದರಲ್ಲಿ ರಿಯಾಯಿತಿ-ವಿನಾಯಿತಿ ಏನಿಲ್ಲ. ಅವರು ಕೂಡಾ ಇದಕ್ಕೆ ಬಲಿಯಾಗಿದ್ದಾರೆ ಎಂದರು.

ಇನ್ನು ಬ್ರ್ಯಾಂಡ್ ಗಳ ಬೆನ್ನತ್ತಿ ಹೋಗುತ್ತಿರುವ ಉಳ್ಳವರು, ಶ್ರೀಮಂತರು ಖರೀದಿಸುವ ವಸ್ತುಗಳ ಮೇಲೆ ತೆರಿಗೆ ಹೇರಿಕೆಗೆ ಕನಿಷ್ಠ ಸಮರ್ಥನೆ ಇದೆ. ಆದರೆ ಗುಡಿಕೈಗಾರಿಕೆಗಳ ರೂಪದಲ್ಲಿ ಅಕ್ಕಿ, ಗೋಧಿ, ಹಾಲು, ಮೊಸರು ಮತ್ತಿತರ ಅಗತ್ಯವಸ್ತುಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ಲಕ್ಷಾಂತರ ಕಿರುಉದ್ಯಮಿಗಳಿಗೂ ಕೂಡಾ ಇದೊಂದು ದೊಡ್ಡ ಹೊಡೆತವಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

17 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

17 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

17 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago