ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಬಗ್ಗೆ ಕಾಂಗ್ರೆಸ್ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.
ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ಸೇ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವಾಗ ಬೇರೆಯವರು ಹೇಗೆ ಸಮಾಧಾನ ಪಟ್ಟುಕೊಳ್ಳಲು ಸಾಧ‍್ಯ ಎಂದು ಅವರು ಪ್ರಶ್ನಿಸಿದ್ದಾರೆ.
ಟ್ವಿಟರ್ ನಲ್ಲಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿರುವ ಬಿಎಸ್ ವೈ ‘ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರೇ ಬಜೆಟ್ ನ್ನು ಒಂದು ಜೋಕ್ ಎಂದಿದ್ದಾರೆ. ಸಿಎಂ ಕುಮಾರಸ್ವಾಮಿಯವರು ತಮ್ಮ ಸರ್ಕಾರದಲ್ಲಿರುವವರಿಗೇ ಒಪ್ಪಿಸಲು ಸಾಧ್ಯವಾಗಿಲ್ಲಅಂದರೆ ರಾಜ್ಯದ ಜನ ಹೇಗೆ ಅವರ ಬಜೆಟ್ ನ್ನು ಒಪ್ಪಿಕೊಳ‍್ಳುತ್ತಾರೆ?’ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದ ಬಳಿಕ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದು ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಿದ ಬಗ್ಗೆ ಮತ್ತು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಸರಿಯಲ್ಲ ಎಂದು ಪತ್ರ ಬರೆದು ನಿರ್ಧಾರ ಮರುಪರಿಶೀಲಿಸಲು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಬಿಎಸ್ ವೈ ಈ ರೀತಿ ಟಾಂಗ್ ಕೊಟ್ಟಿದ್ದಾರೆ.
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…