Featured

ತಮ್ಮದೇ ಸರ್ಕಾರದವರನ್ನು ತೃಪ್ತಿಪಡಿಸದವರು ಜನರಿಗೆ ಹೇಗೆ ನೆಮ್ಮದಿ ಕೊಡುತ್ತಾರೆ ? ಬಿಎಸ್ ವೈ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಬಗ್ಗೆ ಕಾಂಗ್ರೆಸ್ ಶಾಸಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಟಾಂಗ್ ಕೊಟ್ಟಿದ್ದಾರೆ.

ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ಸೇ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವಾಗ ಬೇರೆಯವರು ಹೇಗೆ ಸಮಾಧಾನ ಪಟ್ಟುಕೊಳ್ಳಲು ಸಾಧ‍್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಟ್ವಿಟರ್ ನಲ್ಲಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿರುವ ಬಿಎಸ್ ವೈ ‘ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರೇ ಬಜೆಟ್ ನ್ನು ಒಂದು ಜೋಕ್ ಎಂದಿದ್ದಾರೆ. ಸಿಎಂ ಕುಮಾರಸ್ವಾಮಿಯವರು ತಮ್ಮ ಸರ್ಕಾರದಲ್ಲಿರುವವರಿಗೇ ಒಪ್ಪಿಸಲು ಸಾಧ್ಯವಾಗಿಲ್ಲಅಂದರೆ ರಾಜ್ಯದ ಜನ ಹೇಗೆ ಅವರ ಬಜೆಟ್ ನ್ನು ಒಪ್ಪಿಕೊಳ‍್ಳುತ್ತಾರೆ?’ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದ ಬಳಿಕ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದು ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಿದ ಬಗ್ಗೆ ಮತ್ತು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದು ಸರಿಯಲ್ಲ ಎಂದು ಪತ್ರ ಬರೆದು ನಿರ್ಧಾರ ಮರುಪರಿಶೀಲಿಸಲು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಬಿಎಸ್ ವೈ ಈ ರೀತಿ ಟಾಂಗ್ ಕೊಟ್ಟಿದ್ದಾರೆ.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago