ಬೆಂಗಳೂರು,:ಕಾಂಗ್ರೆಸ್‍ನ ಕೆಲವು ಪ್ರಭಾವಿ ನಾಯಕರು ನನ್ನ ಹೆಸರನ್ನು ಡ್ಯಾಮೇಜ್ ಮಾಡಲು ಷಡ್ಯಂತ್ರ ನಡೆಸುತ್ತಿದ್ದಾರೆ ..ನಾನು ಪಕ್ಷ ಬಿಟ್ಟು ಎಲ್ಲಿಯೂ ಹೋಗಿಲ್ಲ. ಹೋಗುವುದೂ ಇಲ್ಲ ನಮ್ಮ ಪಕ್ಷದ ಕೆಲವು ಸ್ವಯಂಘೋಷಿತ ನಾಯಕರೇ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸಿಡಿದೆದ್ದಾರೆ.
ಬೆಂಗಳೂರಿನ ಸೆವೆನ್ ಮಿನಿಸ್ಟರ್ ಕ್ವಾಟ್ರರ್ಸ್ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಗರದಲ್ಲಿಯೇ ಇದ್ದೇನೆ. ಎಲ್ಲಿಯೂ ಹೋಗಿಲ್ಲ. ಮುಂಬೈಗೂ ಹೋಗಿಲ್ಲ. ಡೆಲ್ಲಿಗೂ ಹೋಗಿಲ್ಲ ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲೇ ಇದ್ದೇನೆ. ನನ್ನ ಹೆಸರಿಗೆ ಮಸಿ ಬಳಿಯಲು ಕೆಲವರು ಈ ರೀತಿ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ತಮ್ಮ ಪಕ್ಷದ ನಾಯಕರ ವಿರುದ್ಧ ಹರಿಹಾಯ್ದರು.
ಇದೇ ಸಮಯದಲ್ಲಿ ಕಾಂಗ್ರೆಸ್‍ನಲ್ಲಿ ಆಂತರಿಕ ಕಿತ್ತಾಟ ಇತ್ತು ಎನ್ನುವುದನ್ನು ಒಪ್ಪಿಕೊಂಡ ಜಾರಕಿಹೊಳಿ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ಮಧ್ಯಸ್ತಿಕೆ ವಹಿಸಿಕೊಂಡು ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಿಳಿಸಿದರು. ಅಲ್ಲಿಗೆ ಅದು ಮುಗಿದ ಅಧ್ಯಾಯ. ಆದರೂ ಪದೇ ಪದೇ ನನ್ನ ಮೇಲೆ ಅಪಪ್ರಚಾರ ಮಾಡುವಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ನಾನು ಸಹಿಸುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…