Featured

ತಮ್ಮ ಸರಕಾರಿ ವಾಹನ ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಕಚೇರಿಗೆ ಬರುವ ಮೂಲಕ ಎಲ್ಲರಿಗೂ ಮಾದರಿಯಾದ ಉಡುಪಿ ಜಿಲ್ಲಾಧಿಕಾರಿ -Vishwanews24

ಉಡುಪಿ,  : ಪ್ರತಿನಿತ್ಯ ಹವಾನಿಯಂತ್ರಿತ ವಾಹನದಲ್ಲಿ ಓಡಾಡುತ್ತಿದ್ದ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಮ್ಮ ಕಾರು, ದ್ವಿಚಕ್ರ ವಾಹನದಲ್ಲಿ ಕಚೇರಿಗೆ ಆಗಮಿಸುತ್ತಿದ್ದ ಇತರೆ ಸಿಬ್ಬಂದಿಗಳು, ಗುರುವಾರ ಸಾರ್ವಜನಿಕ ಸಾರಿಗೆ ಕಲ್ಪನೆಯಲ್ಲಿ, ಸಾರ್ವಜನಿಕ ಸಮೂಹ ಸಾರಿಗೆ ಬಳಕೆಗೆ ಮುನ್ನುಡಿ ಬರೆದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ನಿರ್ದೇಶನದಲ್ಲಿ ಎಲ್ಲರೂ ಒಂದೇ ವಾಹನದಲ್ಲಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಬರುವ ಮೂಲಕ ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆ ಬಳಕೆಗೆ ಎಲ್ಲರಿಗೂ ಮಾದರಿಯಾದರು.

ಗುರುವಾರ ಬೆಳಗ್ಗೆ 9.30 ಜಿಲ್ಲಾಧಿಕಾರಿ ನಿವಾಸದಿಂದ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು, ತಮ್ಮ ಅಧಿಕೃತ ಸರಕಾರಿ ವಾಹನವನ್ನು ಮನೆಯಲ್ಲಿಯೇ ಬಿಟ್ಟು, ತಮ್ಮ ವಾಹನ ಚಾಲಕ ಮತ್ತು ಅಂಗರಕ್ಷಕನೊಂದಿಗೆ ಸಾರ್ವಜನಿಕ ವಾಹನ ಏರಿದರು, ಜಿಲ್ಲಾಧಿಕಾರಿ ನಿವಾಸ ಪಕ್ಕದಲ್ಲೇ ಇರುವ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಹ ತಮ್ಮ ವಾಹನ ಬಿಟ್ಟು ಜಿಲ್ಲಾಧಿಕಾರಿಗೆ ಸಾಥ್ ನೀಡಿದರು, ಅಜ್ಜರಕಾಡು ನ ವಸತಿಗೃಹದಲ್ಲಿರುವ ವಿವಿಧ ಅಧಿಕಾರಿಗಳು ಸಹ ತಮ್ಮ ಸರಕಾರಿ ವಾಹನ ಬಿಟ್ಟು ಸಾರ್ವಜನಿಕ ಸಾರಿಗೆ ಏರಿದರು, ವಸತಿಗೃಹದಲ್ಲಿರುವ ವಿವಿಧ ಇಲಾಖೆಯ ಸಿಬ್ಬಂದಿಗಳು ಸಹ ಇವರನ್ನು ಸೇರಿಕೊಂಡರು.

ಜಿಲ್ಲಾಧಿಕಾರಿ ನಿವಾಸದಿಂದ ಹೊರಟ ವಾಹನ, ಬನ್ನಂಜೆಯ ತಾಲೂಕು ಕಚೇರಿ ಮಾರ್ಗವಾಗಿ, ಸಿಟಿ ಬಸ್ ನಿಲ್ದಾಣ, ಎಂಜಿಎಂ ಕಾಲೇಜು ಮಾರ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ತೆರಳಲು ಕಾಯುತ್ತಿದ್ದ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಬೆಳಗ್ಗೆ 9.50 ಕ್ಕೆ ಸರಿಯಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು.

ವಾರದಲ್ಲಿ ಒಂದು ದಿನವಾದರೂ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕ ಸಾರಿಗೆ ಬಳಸುವುದರ ಮೂಲಕ, ವಾತಾವರಣದಲ್ಲಿ ಇಂಗಾಲದ ಅಂಶ ಕಡಿಮೆ ಮಾಡುವುದರ ಜೊತೆಗೆ ವಾಯು ಮಾಲಿನ್ಯ ನಿಯಂತ್ರಣ ಸಹ ಸಾಧ್ಯವಾಗಲಿದೆ, ಜೊತೆಗೆ ಸಾರ್ವಜನಿಕ ಸಾರಿಗೆಗೂ ಸಹ ಉತ್ತೇಜನ ದೊರೆಯಲಿದೆ ಎಂಬ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಈ ಚಿಂತನೆ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ, ಪ್ರತಿ ಗುರುವಾರ, ಈ ರೀತಿಯ ಸಾರ್ವಜನಿಕ ಸಮೂಹ ಸಾರಿಗೆ ಬಳಸಲು ನಿರ್ಧರಿಸಿದ್ದಾರೆ.

ಸಂಜೆ 5.30 ಕ್ಕೆ ಕಚೇರಿ ಸಮಯ ಮುಕ್ತಾಯದ ನಂತರವೂ ಸಹ ಸಾರ್ವಜನಿಕ ವಾಹನದಲ್ಲಿಯೇ ಜಿಲ್ಲಾಧಿಕಾರಿ ಮತ್ತು ಸಿಬ್ಬಂದಿಗಳು ತೆರಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago