ಮಂಗಳೂರು,: ಕುವೈತ್‌ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ, ಕರಾವಳಿ ಮೂಲದ 19 ಮಂದಿ ಯುವಕರು ಇಂದು ಬೆಳಗ್ಗೆ ಮರಳಿ ತವರು ಸೇರಿದ್ದಾರೆ. ಈ ಸಂತ್ರಸ್ತ ಯುವಕರನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರು ನಗರದ ಪಂಪ್ವೆಲ್ ಬಳಿ ಸ್ವಾಗತಿಸಿದ್ದಾರೆ.
ನಷೂದ್ (ಮಂಜೇಶ್ವರ), ವರುಣ್ (ಆಕಾಶ್ ಭವನ), ಕಲಂದರ್ ಶಫೀಕ್ (ಮೂಡುಬಿದಿರೆ), ನಷೂದ್ (ಕೊಪ್ಪ), ರಫೀಕ್ (ಕೊಪ್ಪ), ಯಕೂಬ್ ಮುಲ್ಲಾ ( ಶಿರ್ಸಿ), ಪಾರ್ಲ್ಟ್ರಿಕ್ ಫೆರ್ನಾಂಡಿಸ್ (ಭಟ್ಕಳ), ಜಗದೀಶ್, ಆಶೀಕ್ (ಉಡುಪಿ), ಪಾರ್ಥಿಕ್ (ಉಡುಪಿ), ಮಹಮ್ಮದ್ ಹಸನ್ (ಕೊಲ್ನಾಡು), ಮಹಮ್ಮದ್ ಇಸ್ಮಾಯಿಲ್ (ಕೊಲ್ನಾಡು), ಅಬ್ದುಲ್ ಮಸೀದ್ (ಕಾರ್ಕಳ), ಮಹಮ್ಮದ್ ಸುಹೇಲ್ (ಉಳ್ಳಾಲ), ನೌಫಾಲ್ ಹುಸೈನ್ (ಉಳ್ಳಾಲ), ಮಹಮ್ಮದ್ ಶಕೀರ್ (ಉಳ್ಳಾಲ), ಅಬ್ದುಲ್ ಲತೀಫ್ (ತುಂಬೆ) ಫಯಾಝ್ (ಕುತ್ತಾರ್), ಅಬುಬಕ್ಕರ್ ಸಿದ್ದೀಕ್ (ಬಜಾಲ್) ತವರಿಗೆ ಬಂದಿಳಿದ ಕರಾವಳಿ ಮೂಲದ ಸಂತ್ರಸ್ತ ಯುವಕರು.
ಇನ್‌ಸ್ಟಿಟ್ಯೂಷನ್ ಆಫ್ ಎಂಜಿನಿಯರ್ಸ್‌ನ ಕುವೈತ್ ಶಾಖೆಯ ಸದಸ್ಯ ಮಂಜೇಶ್ವರ ಮೋಹನದಾಸ್ ಕಾಮತ್, ಅನಿವಾಸಿ ಭಾರತೀಯರಾದ ರಾಜ್ ಭಂಡಾರಿ, ಮಾಧವ ನಾಯಕ್, ವಿಜಯ್ ಫರ್ನಾಂಡಿಸ್ ಕುವೈತ್ ವಿಮಾನ ನಿಲ್ದಾಣದಲ್ಲಿ ಈ ಕಾರ್ಮಿಕರನ್ನು ಬೀಳ್ಕೊಟ್ಟಿದ್ದರು. ಸದ್ಯ 19 ಮಂದಿ ಯುವಕರು ಮರಳಿ ಮಂಗಳೂರು ಸೇರಿದ್ದಾರೆ.
ಈ 19 ಮಂದಿಗೆ ಕುವೈತ್‌ನಿಂದ ಮುಂಬೈಗೆ ವಿಮಾನ ಟಿಕೆಟ್ ಮತ್ತು ಅಲ್ಲಿಂದ ಮಂಗಳೂರಿಗೆ ಬಸ್ ಟಿಕೆಟ್ ಅನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ವ್ಯವಸ್ಥೆ ಮಾಡಿದ್ದರು.
ಯುವಕರ ಬಿಡುಗಡೆ ವಿಚಾರದಲ್ಲಿ ತಕ್ಷಣ ಸ್ಪಂದಿಸಿರುವ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅವರ ಕಾರ್ಯವೈಖರಿಯನ್ನು ಭಾರತೀಯ ರಾಯಭಾರಿ ಕಚೇರಿಯ ದ್ವಿತೀಯ ಕಾರ್ಯದರ್ಶಿ ಸಿಬಿ ಯು. ಶ್ಲಾಘಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…