ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಹಂಗಾರಕಟ್ಟೆ ಬಳಿ ಸಂಭವಿಸಿದೆ.
ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು ಬೆಳಗ್ಗೆ ಕೋಡಿ ಬೆಂಗ್ರೆ ಮೀನುಗಾರಿಕಾ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಮಧ್ಯಾಹ್ನ ಹಂಗಾರಕಟ್ಟೆ ಬಂದರು ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇಂಜಿನ್ ಸ್ಥಗಿತಗೊಂಡಿದೆ. ಎಷ್ಟೇ ಪ್ರಯತ್ನಿಸಿದರೂ ಇಂಜಿನ್ ಪುನಃ ಆರಂಭಗೊಂಡಿಲ್ಲ.
ಈ ನಡುವೆ, ಬಿರುಗಾಳಿ ಮತ್ತು ಅಲೆಗಳ ರಭಸಕ್ಕೆ ಬೋಟ್ ಸಮುದ್ರ ತೀರಕ್ಕೆ ಬಂದು ಕೋಡಿ ಕನ್ಯಾನ ಗ್ರಾಮದ ಕೋಡಿ ಬಳಿ ದಡಕ್ಕೆ ಅಪ್ಪಳಿಸಿತು.
ಬೋಟ್‌ನಲ್ಲಿದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಬೋಟ್ ಮತ್ತು ಅದರಲ್ಲಿದ್ದ ಇತರೆ ಸಾಮಾಗ್ರಿಗಳು ಹಾನಿಗೊಳಗಾಗಿದ್ದು, ಸುಮಾರು 10 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.
ಈ ಘಟನೆ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…