ಉಡುಪಿ : ನಿಮಗೆ ತಾಕತ್ತಿದ್ದರೆ ನನ್ನ ಮೇಲಿನ ಎಲ್ಲಾ ಕೇಸು ರೀ ಓಪನ್ ಮಾಡಿಸಿ, ಮೇ 23ರ ಮೊದಲು ಕೇಸು ಓಪನ್ ಮಾಡಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಸಿ.ಎಂ ಎಚ್.ಡಿ ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿಯ ವೇಳೆ ಯಡಿಯೂರಪ್ಪ ಆಡಿಯೋ ತನಿಖೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ‘ಆತುರ ಏನಿಲ್ಲ. ಆಡಿಯೋ ಎಲ್ಲೂ ಹೋಗಲ್ಲ. ಈಗಲೇ ತನಿಖೆಗೆ ಕೊಟ್ಟರೆ ಇನ್ಯಾವುದೋ ರೀತಿಯಲ್ಲಿ ಅಪಪ್ರಚಾರ ಮಾಡುತ್ತಾರೆ. ಅಧಿಕಾರ ದುರುಪಯೋಗ ಮಾಡಿ ಯಡಿಯೂರಪ್ಪನವರಿಗೆ ತೊಂದರೆ ಕೊಡಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಾರೆ. ಚುನಾವಣೆ ಮುಗಿಯಲಿ ಆಮೇಲೆ ತನಿಖೆ ಮಾಡುವದಾಗಿ’ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ‘ಮತದಾನದ ಬಳಿಕ ಯಡಿಯೂರಪ್ಪ ವಿರುದ್ಧ ಕೇಸ್ ರೀ ಒಪನ್ ಮಾಡಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಆದರೆ ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆ, ತಾಕತ್ತು ಸಿಎಂಗೆ ಇಲ್ಲ. ಎಲ್ಲವನ್ನೂ ಎದುರಿಸಿದ್ದೇನೆ, ಮುಂದೆಯೂ ಎದುರಿಸುತ್ತೇನೆ ತಾಕತ್ತು ಇದ್ದರೆ ನನ್ನ ಮೇಲಿನ ಎಲ್ಲಾ ಕೇಸು ರೀ ಓಪನ್ ಮಾಡಿಸಿ, ಮೇ 23ರ ಮೊದಲು ಕೇಸು ಓಪನ್ ಮಾಡಿಸಿ. ಏಕೆಂದರೆ ಮೇ 23 ನಂತರ ನೀವು ಮನೆಗೆ ಹೋಗುತ್ತೀರಿ, ಆಮೇಲೆ ಕೇಸು ನಾವು ಓಪನ್ ಮಾಡಿಸುತ್ತೇವೆ’ ಎಂದು ಸವಾಲು ಹಾಕಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…