ಬೆಂಗಳೂರು,: ಬಿಜೆಪಿಯವರು ಆಪರೇಷನ್ ಕಮಲ ಮಾಡಿದರೆ ನಾವು ರಿವರ್ಸ್ ಆಪರೇಷನ್ ಮಾಡಬೇಕಾಗುತ್ತದೆ ಎಂಬ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಎಚ್ಚರಿಕೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ತಾಕತ್ತಿದ್ದರೆ ರಿವರ್ಸ್ ಆಪರೇಷನ್ ಮಾಡಿ ಎಂಬ ಸವಾಲು ಹಾಕಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡುತ್ತೀವಿ ಎಂದು ಎಲ್ಲಿಯೂ ಹೇಳಿಲ್ಲ. ಕಳೆದ ಮೂರು ತಿಂಗಳಿನಿಂದ ಅವರು ಅದನ್ನೇ ಹೇಳುತ್ತಿದ್ದಾರೆ. ತಮ್ಮ ಗೊಂದಲ ಮುಚ್ಚಿಹಾಕಲು ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ರಿವರ್ಸ್ ಆಪರೇಷನ್ ಮಾಡುವುದಾದರೆ ಮಾಡಲಿ. ಎಂದು ಹೇಳಿದರು.
ಮುಖ್ಯಮಂತ್ರಿಯವರು ತಮ್ಮ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎನ್ನುತ್ತಿದ್ದಾರೆ. ಬೆಂಗಳೂರಿನಿಂದ ಅಮೆರಿಕ ಏನು ದೂರ ಇದೆಯೇ? ಅವರು ಅಮೆರಿಕದಿಂದ ಬರಲಿ ನೋಡೋಣ. ಎಂದು ವ್ಯಂಗ್ಯವಾಡಿದರು.
ಬಿಜೆಪಿಯವರು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಬಿಜೆಪಿಯ ಕೇಂದ್ರದ ಮುಖಂಡರು ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಆ ಮೂಲಕ ಕಾಂಗ್ರೆಸ್ ಶಾಸಕರನ್ನು ಭಯಗೊಳಿಸುವ ಪ್ರಯತ್ನವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ನಮಗೂ ಶಕ್ತಿ ಸಾಮರ್ಥ್ಯವಿದೆ, ಆದರೆ ಅದನ್ನು ಈ ವರೆಗೆ ಪ್ರಯತ್ನಿಸಿಲ್ಲ, ಇದೇ ರೀತಿ ಮುಂದುವರಿದರೆ ನಾವೂ ಅದಕ್ಕೆ (ರಿವರ್ಸ್ ಆಪರೇಷನ್) ಕೈಹಾಕಬೇಕಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…