ನವದೆಹಲಿ: ಐತಿಹಾಸಿಕ ತಾಜ್‌ಮಹಲ್‌ನಲ್ಲಿ ನಮಾಜ್‌ಗೆ ಅವಕಾಶ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನಮಾಜ್ ಗೆ ಅವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನಿರಾಕರಿಸಿರುವ ಸುಪ್ರೀಂ, ಐತಿಹಾಸಿಕ ತಾಜಮಹಲ್ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿದೆ. ಹಾಗಾಗಿ ಇಲ್ಲಿ ನಮಾಜ್ ಮಾಡಬೇಕೆನ್ನುವ ಯೋಚನೆಯನ್ನೇ ತಲೆಯಿಂದ ತೆಗೆದುಹಾಕಿ. ನಮಾಜ್‌ಗಾಗಿಯೇ ಇತರೆ ಸ್ಥಳಗಳು ಇವೆ. ಹೀಗಿರುವಾಗ ಐತಿಹಾಸಿಕ ಸ್ಮಾರಕಗಳಲ್ಲಿ ಈ ರೀತಿಯ ಕೆಲಸಗಳನ್ನು ಮಾಡುವುದನ್ನು ತಪ್ಪಿಸಬೇಕು ಎಂದು ಕೋರ್ಟ್ ಹೇಳಿದೆ.
ಪ್ರಾರ್ಥನೆ ಸಲ್ಲಿಸಲು ತಾಜ್ ಮಹಲ್‍ಗೆ ಯಾಕೆ ಹೋಗಬೇಕು ಎಂದು ಪ್ರಶ್ನಿಸಿದ ಪೀಠ, ತಾಜ್ ಮಹಲ್ ವಿಶ್ವದ ಅದ್ಭುತ ಪ್ರದೇಶವಾಗಿದ್ದು, ಇಲ್ಲಿಗೆ ದಿನನಿತ್ಯ ಸಾವಿರಾರು ಪ್ರವಾಸಿಗರೂ ವರ್ಷಪೂರ್ತಿ ಆಗಮಿಸುತ್ತಲೇ ಇರುತ್ತಾರೆ. ಹೀಗಾಗಿ ತಾಜ್ ಮಹಲ್ ನಲ್ಲಿ ಪ್ರಾರ್ಥನೆಗೆ ಅವಕಾಶ ನೀಡುತ್ತಿಲ್ಲ. ಅವಕಾಶ ನೀಡಿದರೆ ಭದ್ರತೆಗೆ ಸಮಸ್ಯೆಯಾಗುತ್ತದೆ. ಅಲ್ಲಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವ ಬದಲು ಸಮೀಪವೇ ಇರುವ ಬೇರೆ ಮಸೀದಿಗಳಿಗೆ ತೆರಳಬಹುದು ಎಂದು ತನ್ನ ಆದೇಶದಲ್ಲಿ ಹೇಳಿದೆ.
ತಾಜ್‌ಮಹಲ್‌ಗೆ ಹಾನಿ ಉಂಟಾಗುತ್ತಿದ್ದು, ಹಾನಿಯನ್ನು ತಡೆಗಟ್ಟಲು ಎಎಸ್‌ಐ ಅಧಿಕಾರಿಗಳು ಸರಿಯಾಗಿ ತಮ್ಮ ಕೆಲಸವನ್ನು ನಿರ್ವಹಿಸಿದ್ದರೆ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ತಾಜ್ ಮಹಲ್ ಅನ್ನು ರಕ್ಷಿಸಲು ತಾವು ಕೈಗೊಳ್ಳುವ ಕ್ರಮಗಳ ಕರಡು ದಾಖಲೆ ಸಲ್ಲಿಸಲು ಉತ್ತರ ಪ್ರದೇಶ ಸರ್ಕಾರ ಮತ್ತು ಕೇಂದ್ರಕ್ಕೆ ನೋಟಿಸ್ ನೀಡಿತ್ತು
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…