Featured

ತಾಜ್‌ ಮಹಲ್‌ನಲ್ಲಿ ನಮಾಜ್‌ಗೆ ಅವಕಾಶವಿಲ್ಲ: ಸುಪ್ರೀಂ ಕೋರ್ಟ್‌

ನವದೆಹಲಿ: ಐತಿಹಾಸಿಕ ತಾಜ್‌ಮಹಲ್‌ನಲ್ಲಿ ನಮಾಜ್‌ಗೆ ಅವಕಾಶ ಕಲ್ಪಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ನಮಾಜ್‌ ಗೆ ಅವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನಿರಾಕರಿಸಿರುವ ಸುಪ್ರೀಂ, ಐತಿಹಾಸಿಕ ತಾಜಮಹಲ್‌ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿದೆ. ಹಾಗಾಗಿ ಇಲ್ಲಿ ನಮಾಜ್‌ ಮಾಡಬೇಕೆನ್ನುವ ಯೋಚನೆಯನ್ನೇ ತಲೆಯಿಂದ ತೆಗೆದುಹಾಕಿ. ನಮಾಜ್‌ಗಾಗಿಯೇ ಇತರೆ ಸ್ಥಳಗಳು ಇವೆ. ಹೀಗಿರುವಾಗ ಐತಿಹಾಸಿಕ ಸ್ಮಾರಕಗಳಲ್ಲಿ ಈ ರೀತಿಯ ಕೆಲಸಗಳನ್ನು ಮಾಡುವುದನ್ನು ತಪ್ಪಿಸಬೇಕು ಎಂದು ಕೋರ್ಟ್‌ ಹೇಳಿದೆ.

ಪ್ರಾರ್ಥನೆ ಸಲ್ಲಿಸಲು ತಾಜ್ ಮಹಲ್‍ಗೆ ಯಾಕೆ ಹೋಗಬೇಕು ಎಂದು ಪ್ರಶ್ನಿಸಿದ ಪೀಠ, ತಾಜ್ ಮಹಲ್ ವಿಶ್ವದ ಅದ್ಭುತ ಪ್ರದೇಶವಾಗಿದ್ದು, ಇಲ್ಲಿಗೆ ದಿನನಿತ್ಯ ಸಾವಿರಾರು ಪ್ರವಾಸಿಗರೂ ವರ್ಷಪೂರ್ತಿ ಆಗಮಿಸುತ್ತಲೇ ಇರುತ್ತಾರೆ. ಹೀಗಾಗಿ ತಾಜ್ ಮಹಲ್ ನಲ್ಲಿ ಪ್ರಾರ್ಥನೆಗೆ ಅವಕಾಶ ನೀಡುತ್ತಿಲ್ಲ. ಅವಕಾಶ ನೀಡಿದರೆ ಭದ್ರತೆಗೆ ಸಮಸ್ಯೆಯಾಗುತ್ತದೆ. ಅಲ್ಲಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವ ಬದಲು ಸಮೀಪವೇ ಇರುವ ಬೇರೆ ಮಸೀದಿಗಳಿಗೆ ತೆರಳಬಹುದು ಎಂದು ತನ್ನ ಆದೇಶದಲ್ಲಿ ಹೇಳಿದೆ.

ತಾಜ್‌ಮಹಲ್‌ಗೆ ಹಾನಿ ಉಂಟಾಗುತ್ತಿದ್ದು, ಹಾನಿಯನ್ನು ತಡೆಗಟ್ಟಲು ಎಎಸ್‌ಐ ಅಧಿಕಾರಿಗಳು ಸರಿಯಾಗಿ ತಮ್ಮ ಕೆಲಸವನ್ನು ನಿರ್ವಹಿಸಿದ್ದರೆ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ತಾಜ್ ಮಹಲ್ ಅನ್ನು ರಕ್ಷಿಸಲು ತಾವು ಕೈಗೊಳ್ಳುವ ಕ್ರಮಗಳ ಕರಡು ದಾಖಲೆ ಸಲ್ಲಿಸಲು ಉತ್ತರ ಪ್ರದೇಶ ಸರ್ಕಾರ ಮತ್ತು ಕೇಂದ್ರಕ್ಕೆ ನೋಟಿಸ್ ನೀಡಿತ್ತು

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago