Featured

ತಾಯಿಯ ಪಾದದಡಿ ಕಣ್ಣೀರಿಟ್ಟ ಭೂಗತ ಪಾತಕಿ!

ಉಡುಪಿ:  ಭೂಗತ ಪಾತಕಿ ಬನ್ನಂಜೆ ರಾಜ ಸುಮಾರು 25 ವರ್ಷಗಳ ಕಾಲ ಅಜ್ಞಾತ ಸ್ಥಳದಲ್ಲಿದ್ದನು. 2015ರಲ್ಲಿ ಮೊರಕ್ಕೋದಲ್ಲಿ ಪೊಲೀಸರಿಗೆ ಶರಣಾಗಿದ್ದ. 2015ರ ಆಗಸ್ಟ್ 15ರಂದು ಉಡುಪಿಗೆ ಕರೆತರಲಾಗಿತ್ತು. 10ಕ್ಕೂ ಹೆಚ್ಚು ಪ್ರಕರಣಗಳು ಸದ್ಯ ಬನ್ನಂಜೆ ರಾಜನ ಮೇಲಿದ್ದು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ. ಸುಮಾರು 25 ವರ್ಷಗಳಿಂದ ಕುಟುಂಬದ ಸಂಪರ್ಕದಿಂದ ದೂರವಾಗಿದ್ದ ರಾಜನಿಗೆ ಅಮ್ಮನ ಅನಾರೋಗ್ಯ ಬಹಳ ಕಾಡುತ್ತಿದ್ದಂತೆ. ಅಮ್ಮನ ಕೊನೆಯ ದಿನಗಳಲ್ಲಿ ಅವರ ಜೊತೆಗೆ ಇರಬೇಕು ಅಂತ ಅವನ ಮನಸ್ಸು ಹಂಬಲಿಸಿದೆ. ಹೀಗಾಗಿ ಪೊಲೀಸರಿಗೆ ಶರಣಾಗಿದ್ದಾನೆ.

ತಾಯಿಯ ಅನಾರೋಗ್ಯದ ಸಂದರ್ಭ ಮನೆಗೆ ಬಂದಿದ್ದ ಬನ್ನಂಜೆ, ಎರಡನೇ ಭೇಟಿಯ ಸಂದರ್ಭ ತಾಯಿ ಇಲ್ಲವಾಗಿದ್ದಾರೆ. ಅಂತ್ಯ ಸಂಸ್ಥಾರದ ಚಿತೆಯ ಮೇಲೆ ಮಲಗಿದ್ದ ತಾಯಿಯ ಪಾದದ ಕೆಳಗೆ ತಲೆಯಿಟ್ಟು ಕೆಲಕಾಲ ಕಣ್ಣೀರಿಟ್ಟಿದ್ದಾನೆ. ಬನ್ನಂಜೆ ರಾಜಾ, ತಂದೆ ಮತ್ತು ಅಣ್ಣನ ಜೊತೆಗೆ ತಾಯಿಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡಿದ್ದಾನೆ. ಪ್ರಕ್ರಿಯೆಗಳೆಲ್ಲಾ ಮುಗಿಯುವ ತನಕ ಸ್ಮಶಾನದಲ್ಲಿರಲು ಅವಕಾಶ ನೀಡಿದ ಪೊಲೀಸರು ಮತ್ತೆ ನಗರ ಠಾಣೆಗೆ ಕರೆದೊಯ್ದಿದ್ದಾರೆ.

ಬನ್ನಂಜೆ ರಾಜನ ಸಂಬಂಧಿ ಸುನೀಲ್ ದಾಸ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ವಿಲಾಸಿನಿ ಶೆಟ್ಟಿಗಾರ್ ಉತ್ತಮ ಶಿಕ್ಷಕಿಯಾಗಿ ಉಡುಪಿಯ ಎಲ್ಲಾ ಭಾಗಗಳಲ್ಲೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದರು. ಕಾಲು ಜಾರಿ ಬಿದ್ದು ಮೃತಪಟ್ಟಿದ್ದು, ಬನ್ನಂಜೆ ರಾಜನನ್ನು ಬೆಳಗಾವಿಯಿಂದ ಕರೆತರಲು ಉಡುಪಿ ಕೋರ್ಟ್ ಅವಕಾಶ ನೀಡಿದೆ. ಇಡೀ ಕುಟುಂಬಸ್ಥರ ಪರವಾಗಿ ನಾವು ಕೋರ್ಟ್ ಮತ್ತು ಪೊಲೀಸ್ ಇಲಾಖೆಗೆ ಧನ್ಯವಾದ ಹೇಳುತ್ತೇವೆ. ತಾಯಿಯ ಕೊನೆಗಾಲದಲ್ಲಿ ಜೊತೆಗಿರಬೇಕು ಎಂದು ರಾಜೇಂದ್ರ (ಬನ್ನಂಜೆ ರಾಜ) ಹೇಳಿಕೊಂಡಿದ್ದನು. ಆದರೆ ತಾಯಿಯ ಮುಖವನ್ನಾದರೂ ನೋಡುವ ಅವಕಾಶ ಸಿಕ್ಕಿದ್ದು ನೆಮ್ಮದಿ ತಂದಿದೆ ಎಂದು ಹೇಳಿದರು.

ಭೂಗತ ಪಾತಕಿ ಬನ್ನಂಜೆ ರಾಜನ ತಾಯಿ ವಿಲಾಸಿನಿ ಶೆಟ್ಟಿಗಾರ್ ಕಾಲು ಜಾರಿ ಬಿದ್ದು ಮೃತಪಟ್ಟಿದ್ದು, ಇಂದು ಅಂತ್ಯಸಂಸ್ಕಾರ ನಡೆದಿದೆ. ಬನ್ನಂಜೆ ರಾಜ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು, ತಾಯಿಯ ಅಂತಿಮ ವಿಧಿವಿಧಾನ ಮತ್ತು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದಾನೆ.

ಉಡುಪಿಯ ಕಲ್ಮಾಡಿಯಲ್ಲಿರುವ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದ ವಿಲಾಸಿನಿ ಶೆಟ್ಟಿಗಾರ್ಗೆ ಹೃದಯಾಘಾತವಾಗಿತ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಬಳಿಕ ಬನ್ನಂಜೆ ರಾಜಾ ಕುಟುಂಬಸ್ಥರು ಉಡುಪಿ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದು, ರಾಜನನ್ನು ಒಂದು ದಿನದ ಮಟ್ಟಿಗೆ ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಪರವಾನಿಗೆ ಪಡೆಯುವುದರಲ್ಲಿ ಯಶಸ್ವಿಯಾದರು.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago