Featured

ತಾಯಿ ಮಗಳಿಗೆ ಯುಕೆ ಕೊರೋನಾ ರೂಪಾಂತರ ವೈರಸ್ : ಯಾವುದೇ ಸೀಲ್ ಡೌನ್ ‌ ಮಾಡಿಲ್ಲ: ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟನೆ -Vishwanews24

ತಾಯಿ ಮಗಳಿಗೆ ಯುಕೆ ಕೊರೋನಾ ರೂಪಾಂತರ ವೈರಸ್ : ಯಾವುದೇ ಸೀಲ್ ಡೌನ್ ‌ ಮಾಡಿಲ್ಲ: ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟನೆ -Vishwanews24

ಬೆಂಗಳೂರು : ಬ್ರಿಟನ್ ನಿಂದ ಬಂದಿದ್ದಂತ ನಗರದ ತಾಯಿ ಮಗಳಿಗೆ ಯುಕೆ ಕೊರೋನಾ ರೂಪಾಂತರ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರಿಂದಾಗಿ ಅವರು ವಾಸವಾಗಿರುವಂತ ವಸಂತ ನಗರದ ಅಪಾರ್ಟ್ಮೆಂಟ್ ಸೀಲ್ ಡೌನ್ ಮಾಡಲಾಗುತ್ತಿದೆ ಎನ್ನಲಾಗಿತ್ತು. ಆದ್ರೇ ಅಪಾರ್ಟ್ಮೆಂಟ್ ನಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡಿದ್ದೇವೆಯೇ ಹೊರತು, ಯಾವುದೇ ಸೀಲ್ ಡೌನ್ ಮಾಡಿಲ್ಲ ಎಂಬುದಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ, ನಗರದಲ್ಲಿ ಸೋಂಕು ದೃಢಪಟ್ಟ ಸಂಪರ್ಕಿತರಾಗಿದ್ದಂತವರನ್ನು ಐಸೋಲೇಷನ್ ಮಾಡಲಾಗಿದೆ. ಸೋಂಕಿತ ಪ್ರದೇಶದಲ್ಲಿ ಕೋವಿಡ್ ಸೋಂಕು ಮಾರ್ಗಸೂಚಿ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಇದರ ಹೊರತಾಗಿ ಸೀಲ್ ಡೌನ್ ಆಗಲಿ, ಲಾಕ್ ಡೌನ್ ಆಗಲಿ ಮಾಡುವಂತೆ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ವಸಂತ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿದ್ದಂತ ತಾಯಿ ಮಗಳು ಬ್ರಿಟನ್ ನಿಂದ ಹಿಂದಿರುಗಿದ್ದರು. ಇಂತಹ ತಾಯಿ ಮಗಳಿಗೆ ಬ್ರಿಟನ್ ವೈರಸ್ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಅವರ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಿ ಐಸೋಲೇಷನ್ ಮಾಡಲಾಗಿದೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ತಾಯಿ-ಮಗಳು ವಾಸವಿದ್ದಂತ ಅಪಾರ್ಟ್ಮೆಂಟ್ ಸೀಲ್ ಡೌನ್ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಇದೀಗ ಬಿಬಿಎಂಪಿ ಆರೋಗ್ಯಾಧಿಕಾರಿ ಸೀಲ್ ಡೌನ್ ಇಲ್ಲ, ನಿರ್ದಿಷ್ಟ ಪ್ರದೇಶದಲ್ಲಿ ಅಗತ್ಯ ಸುರಕ್ಷತಾ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

14 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

14 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

15 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

15 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

15 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

16 hours ago