ಬೆಂಗಳೂರು : ಬ್ರಿಟನ್ ನಿಂದ ಬಂದಿದ್ದಂತ ನಗರದ ತಾಯಿ ಮಗಳಿಗೆ ಯುಕೆ ಕೊರೋನಾ ರೂಪಾಂತರ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರಿಂದಾಗಿ ಅವರು ವಾಸವಾಗಿರುವಂತ ವಸಂತ ನಗರದ ಅಪಾರ್ಟ್ಮೆಂಟ್ ಸೀಲ್ ಡೌನ್ ಮಾಡಲಾಗುತ್ತಿದೆ ಎನ್ನಲಾಗಿತ್ತು. ಆದ್ರೇ ಅಪಾರ್ಟ್ಮೆಂಟ್ ನಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡಿದ್ದೇವೆಯೇ ಹೊರತು, ಯಾವುದೇ ಸೀಲ್ ಡೌನ್ ಮಾಡಿಲ್ಲ ಎಂಬುದಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ, ನಗರದಲ್ಲಿ ಸೋಂಕು ದೃಢಪಟ್ಟ ಸಂಪರ್ಕಿತರಾಗಿದ್ದಂತವರನ್ನು ಐಸೋಲೇಷನ್ ಮಾಡಲಾಗಿದೆ. ಸೋಂಕಿತ ಪ್ರದೇಶದಲ್ಲಿ ಕೋವಿಡ್ ಸೋಂಕು ಮಾರ್ಗಸೂಚಿ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಇದರ ಹೊರತಾಗಿ ಸೀಲ್ ಡೌನ್ ಆಗಲಿ, ಲಾಕ್ ಡೌನ್ ಆಗಲಿ ಮಾಡುವಂತೆ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ವಸಂತ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿದ್ದಂತ ತಾಯಿ ಮಗಳು ಬ್ರಿಟನ್ ನಿಂದ ಹಿಂದಿರುಗಿದ್ದರು. ಇಂತಹ ತಾಯಿ ಮಗಳಿಗೆ ಬ್ರಿಟನ್ ವೈರಸ್ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಅವರ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಿ ಐಸೋಲೇಷನ್ ಮಾಡಲಾಗಿದೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ತಾಯಿ-ಮಗಳು ವಾಸವಿದ್ದಂತ ಅಪಾರ್ಟ್ಮೆಂಟ್ ಸೀಲ್ ಡೌನ್ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಇದೀಗ ಬಿಬಿಎಂಪಿ ಆರೋಗ್ಯಾಧಿಕಾರಿ ಸೀಲ್ ಡೌನ್ ಇಲ್ಲ, ನಿರ್ದಿಷ್ಟ ಪ್ರದೇಶದಲ್ಲಿ ಅಗತ್ಯ ಸುರಕ್ಷತಾ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…