Featured

ತಿಂಡಿ ಪ್ರಿಯರೆ ಎಚ್ಚರ: ಕೇರಳದಿಂದ ಆಮದಾಗುತ್ತಿರುವ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆ – vishwanews24

ತಿಂಡಿ ಪ್ರಿಯರೆ ಎಚ್ಚರ: ಕೇರಳದಿಂದ ಆಮದಾಗುತ್ತಿರುವ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆ

ಬೆಂಗಳೂರು: ಕೃತ ಬಣ್ಣಗಳ ಬಳಕೆ, ರಾಸಾಯನಿಕ ಮಿಶ್ರಣ, ರುಚ್ಚಿ ಹೆಚ್ಚಿಸುವಂತಹ ವಸ್ತುಗಳ ಬಳಕೆ ಮಾಡುವ ಆಹಾರಗಳನ್ನು ಸೇವಿಸಿದರೆ ಅವುಗಳಿ0ದ ಅನಾರೋಗ್ಯಕ್ಕೆ ತುತ್ತಾಗುವುದು ಖಂಡಿತ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಇಲಾಖೆ ಬೆಂಗಳೂರಿನಾದ್ಯಂತ ಕಾರ್ಯಾಚರಣೆ ಕೈಗೊಂಡು ಇಂತಹ ಅಪಾಯಕಾರು ವಸ್ತುಗಳನ್ನು ಪತ್ತೆಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.

ಇದೀಗ ಕೇರಳದಿಂದ ಆಮದಾಗಿ 31 ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆಯಾಗಿದೆ. ದೀಪಾವಳಿ ಸಿಹಿ ತಿಂಡಿಗಳಲ್ಲಿಯೂ ಕೃತಕ ಬಣ್ಣಗಳ ಬಳಕೆ ಪತ್ತೆಯಾಗಿದೆ. ಎಲ್ಲಾ ಪದಾರ್ಥಗಳ ಉತ್ಪಾದನಾ ಘಟಕಗಳ ಮೇಲೆ ಕ್ರಮ ಕೈಗೊಳ್ಳಲು ಇಲಾಖೆ ನಿರ್ಧರಿಸಿದೆ.ಹೊರ ರಾಜ್ಯದಿಂದ ಆಮದಾಗುವ ಆಹಾರ ಪದಾರ್ಥಗಳ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಪರೀಕ್ಷೆ ನಡೆಸಿದ್ದು, ಕೇರಳದಿಇಂದ ಆಮದಾಗುವ ಖಾರಾ ಮಿಕ್ಸ್ಚರ್, ಚಿಪ್ಸ್, ಹಲ್ವಾ, ಮುರುಕು, ರಸ್ಕ್, ಡ್ರೈಫ್ರೂಟ್ಸ್ ಸೇರಿದಂತೆ 31 ಪದಾರ್ಥಗಳಲ್ಲಿ ಕೃತಕ ಬಣ್ಣ ಬಳಸಲಾಗುತ್ತದೆ ಎಂದು ತಿಳಿದುಬಂದಿದೆ. ಇದು ಆರೋಗ್ಯಕ್ಕೆ ಹಾನಿಕಾರಕ ಎಂದು ಇಲಾಖೆ ತಿಳಿಸಿದೆ.

ಈ ತಿಂಡಿಗಳಲ್ಲ್ alura red, carmoisiine,tartrazine, sunset yellow ಸೇರಿದಂತೆ ವಿವಿಇಧ ಕೃತ ಬಣ್ಣ ಬಳಸಿರುವುದು ಪತ್ತೆಯಾಗಿದೆ. ಇವುಗಳ ಸೇವನೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ.

ಕೆಲ ದಿನಗಳ ಹಿಂದೆ ಆರೋಗ್ಯ ಸುರಕ್ಷತಾ ಹಾಗೂ ಗುಣಮಟ್ಟ ಇಲಾಖೆ ಬೀದಿ ಬದಿ ಮಾರಾಟ ಮಾಡುವ ಗೋಬಿ ಮಂಚೂರಿ, ಪಾನಿಪುರಿ ಸೇರಿದಂತೆ ಅನೇಕ ತಿನಿಸುಗಳಲ್ಲಿ ಬಳಸುವ ಮಸಾಲೆ ಪದಾರ್ಥಗಳಲ್ಲಿ ಹಾನಿಕಾರಕ ಅಂಶಗಳಿವೆ ಎಂದು ತಿಳಿಸಿತ್ತು. ಇದೀಗ ತಿಂಡಿ ಪ್ರಿಯರಿಗೆ ಪ್ರಿಯವಾಗಿರುವ ಕುರುಕು-ಮುರುಕು, ಸಿಹಿ ತಿಂಡಿಗಳಲ್ಲಿಯೂ ಕೃತಕ ಬಣ್ಣ ಬಳಕೆ ಪತ್ತೆಯಾಗಿರುವುದು ಆತಂಕ ತಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago