ಮಂಗಳೂರು: ಓಡಿಶಾ ಮತ್ತು ಆಂಧ್ರದ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿತ್ಲಿ ಚಂಡಮಾರುತದ ಪ್ರಭಾವ ಕರಾವಳಿಯ ಕಡಲ ತೀರದ ಮೇಲೂ ಉಂಟಾಗಿದ್ದು, ಕಡಲಿನಲ್ಲಿ ಅಲೆಗಳ ಅಬ್ಬರ ಮೀತಿ ಮಿರಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಉಂಟಾಗಿರುವ ತಿತ್ಲಿ ಚಂಡಮಾರುತ ಆಂಧ್ರ ಮತ್ತು ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿದೆ. ಈ ನಡುವೆ ತಿತ್ಲಿ ಚಂಡಮಾರುತದ ಪ್ರಭಾವ ಕರ್ನಾಟಕ ಕರಾವಳಿಯ ಮೇಲೂ ಆಗಿದೆ.
ಬೆಳಗ್ಗಿನಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು, ಉಳ್ಳಾಲ, ಸೋಮೇಶ್ವರ-ಉಚ್ಚಿಲದ ಹಲವು ಕಡೆ ಕಡಲಿನ ಅಬ್ಬರ ಮಿತಿ ಮೀರಿದೆ. ಸೋಮೇಶ್ವರ ಉಚ್ಚಿಲ ಸಮೀಪದ ಪೆರಿಬೈಲ್‌ನಲ್ಲಿ ಕಡಲಿನ ಅಲೆಗಳು ಸಮುದ್ರ ಪಕ್ಕದ ರಸ್ತೆಯನ್ನೂ ದಾಟಿ ಮುನ್ನುಗ್ಗಿವೆ. ಅಲ್ಲದೆ ನಾಲ್ಕೈದು ಮನೆಯೊಳಗೆ ನೀರು ನುಗ್ಗಿವೆ. ಸಮುದ್ರದ ಅಲೆಗಳು ಭಾರಿ ಎತ್ತರಕ್ಕೆ ಅಪ್ಪಳಿಸುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಕಡಲ ಅಬ್ಬರಕ್ಕೆ ಹೆದರಿದ ಮೀನುಗಾರರು ಭಯಭೀತಗೊಂಡು ಸಮುದ್ರಕ್ಕಿಳಿಯಲಿಲ್ಲ ಎಂದು ತಿಳಿದು ಬಂದಿದೆ.
ಆ ಹಿನ್ನಲೆಯಲ್ಲಿ ಪಣಂಬೂರು ಬೀಚ್‌ನಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ. ಈ ನಡುವೆ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಂಭವವೂ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಅಕ್ಟೋಬರ್ 13ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…