Featured

ತಿಮರೋಡಿ ಬಂಧನ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ – vishwanews24

ತಿಮರೋಡಿ ಬಂಧನ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸರಹದ್ದಿನ 500 ಮೀಟರ್ ವ್ಯಾಪ್ತಿಯಲ್ಲಿ ಅಗೋಸ್ಟ್ 21 ರ ಮಧ್ಯಾಹ್ನ 1 ಗಂಟೆಯಿಂದ ಅಗೋಸ್ತ್ 22 ರ ಮಧ್ಯಾಹ್ನ 1 ಗಂಟೆಯ ತನಕ ನಿಷೇಧಾಜ್ಷೆಯನ್ನು ಜಾರಿಗೆಗೊಳಿಸಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಆದೇಶ ಹೊರಡಿಸಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಕ್ಕೆ ಸಂಬಂಧಿಸಿದಂತೆ ಆರೋಪಿತ ಶ್ರೀ ಮಹೇಶ್ ಶೆಟ್ಟಿ ತಿಮ್ಮರೋಡಿ ಇವರನ್ನು ಉಜಿರೆಯಲ್ಲಿ ಬಂಧಿಸಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆ ತರಲಾಗಿದೆ, ಸದ್ರಿಯವರು ಸಕ್ರೀಯ ಹಿಂದೂ ಕಾರ್ಯಕರ್ತರಾಗಿದ್ದು, ಸೌಜನ್ಯ ವರ . ಹೋರಾಟಗಾರರಾಗಿದ್ದು, ಸದ್ರಿಯವರನ್ನು ಬ್ರಹ್ಮಾವರ ಠಾಣೆಗೆ ತನಿಖೆ ಬಗ್ಗೆ ಕರೆ ತಂದಾಗ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು ಹೊರಡಿಸುವ ಆವಶ್ಯಕತೆ ಇರುವುದರಿಂದ ದಿನಾಂಕ: 21/08/2025 ರಂದು ಅಪರಾಹ್ನ 01:00 ಗಂಟೆಯಿಂದ ದಿನಾಂಕ:22/08/2025ರ ಅಪರಾಹ್ನ, 01:00 ಗಂಟೆಯವರೆಗೆ ನಿಷೇಧಾಜ್ಞೆ ಆದೇಶವನ್ನು ಹೊರಡಿಸುವಂತೆ ಕೋರಿ ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ ಇವರು ಉಲ್ಲೇಖದಂತೆ ವರದಿಯನ್ನು ಸಲ್ಲಿಸಿರುತ್ತಾರೆ.

ಉಡುಪಿ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿರುತ್ತದೆ. ಈ ಹಿನ್ನಲೆಯಲ್ಲಿಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರ ವರದಿಯನ್ನು ಆಧರಿಸಿ ಮುಂಜಾಗೃತ ಕ್ರಮವಾಗಿ ಸ್ವರೂಪ .ಟಿ.ಕೆ.ಭಾ ಆ ಸೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಉಡುಪಿ ಜಿಲ್ಲೆ ಉಡುಪಿ ಆದ ನಾನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ಪದತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡಂತೆ ಆದೇಶವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago