ತಿರುಮಲ: ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಕಾಲ್ತುಳಿತದದಲ್ಲಿ ಇನ್ನೂ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ಟೋಕನ್ ವಿತರಣೆಗೆ ಟಿಟಿಡಿ ವ್ಯವಸ್ಥೆ ಮಾಡಿದೆ. ಆದರೆ, ನಿನ್ನೆ ಸಂಜೆ ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ಕಾಲ್ತುಳಿತ ಸಂಭವಿಸಿದೆ.
ಭಾರೀ ಸಂಖ್ಯೆಯಲ್ಲಿ ಭಕ್ತರು ಟೋಕನ್ ಪಡೆಯಲು ಯತ್ನಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಇದೇ ವೇಳೆ ಭಕ್ತರೊಬ್ಬರು ಅಸ್ವಸ್ಥರಾದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಖ್ಯ ಗೇಟ್ ತೆರೆಯಲಾಯಿತು. ಈ ಸಂದರ್ಭ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆ ಗೇಟ್ ಮೂಲಕ ನುಗ್ಗಿದ್ದಾರೆ. ಹೀಗಾಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಇನ್ನು ಕಾಲ್ತುಳಿತದಲ್ಲಿ ಗಾಯಗೊಂಡವರ ಸಂಖ್ಯೆ ಏರಿಕೆಯಾಗುವ ನಿರೀಕ್ಷೆ ಇದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು, ಟೋಕನ್ ಪಡೆಯಲು ಬಂದಿದ್ದ ಭಕ್ತರು ಪ್ರಾಣ ಕಳೆದುಕೊಂಡಿರುವುದು ತೀವ್ರ ಬೇಸರ ತಂದಿದೆ ಎಂದು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮಗಳನ್ನು ಕೈಗೊಂಡು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಆದೇಶಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…