ತಿರುಪತಿ ತಿರುಮಲ ದೇವಸ್ಥಾನಕ್ಕೆ  1 ಕೋಟಿ ರೂ. ದೇಣಿಗೆ  ನೀಡಿದ ಚೆನ್ನೈ ಮೂಲದ ಮುಸ್ಲಿಂ ದಂಪತಿ -Vishwanews24

Featured, ರಾಷ್ಟ್ರ ನ್ಯೂಸ್

ತಿರುಪತಿ ತಿರುಮಲ ದೇವಸ್ಥಾನಕ್ಕೆ  1 ಕೋಟಿ ರೂ. ದೇಣಿಗೆ  ನೀಡಿದ ಚೆನ್ನೈ ಮೂಲದ ಮುಸ್ಲಿಂ ದಂಪತಿ -Vishwanews24

ಚೆನ್ನೈ: ತಿರುಪತಿ ತಿರುಮಲ ದೇವಸ್ಥಾನಕ್ಕೆ  ಚೆನ್ನೈ  ಮೂಲದ ಮುಸ್ಲಿಂ ದಂಪತಿ 1 ಕೋಟಿ ರೂ. ದೇಣಿಗೆಯನ್ನು  ನೀಡಿದ್ದಾರೆ.

ಚೆನ್ನೈ ಮೂಲದ ಮುಸ್ಲಿಂ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ಈ ದೇಣಿಗೆಯನ್ನು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ  ದೇವಸ್ಥಾನಂ (ಟಿಟಿಡಿ)ಗೆ ನೀಡಿದರು. ಈ ಹಣದಲ್ಲಿ ನೂತನವಾಗಿ ನಿರ್ಮಾಣವಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂ. ಮೌಲ್ಯದ ಪೀಠೋಪಕರಣಗಳು ಮತ್ತು ಪಾತ್ರೆಗಳು ಮತ್ತು ಎಸ್‍ವಿ ಅನ್ನ ಪ್ರಸಾದ ಟ್ರಸ್ಟ್‌ಗೆ 15 ಲಕ್ಷ ರೂ. ನೀಡಿರುವುದು ಸೇರಿವೆ.

ಅಬ್ದುಲ್ ಘನಿ ದೇವಸ್ಥಾನಕ್ಕೆ ದೇಣಿಗೆ ನೀಡುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ ಕೊರೊನಾ ಸಮಯದಲ್ಲಿ ದೇವಾಲಯದ ಆವರಣದಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸಲು ಬಹು ಆಯಾಮದ ಟ್ರಾಕ್ಟರ್-ಮೌಂಟೆಡ್ ಸ್ಪ್ರೇಯರ್ ಅನ್ನು ದೇಣಿಗೆ ನೀಡಿದರು. ಇದಕ್ಕೂ ಮುನ್ನ ದೇವಸ್ಥಾನಕ್ಕೆ ತರಕಾರಿ ಸಾಗಿಸಲು ರೂ.35 ಲಕ್ಷದ ರೆಫ್ರಿಜರೇಟರ್ ಟ್ರಕ್ ಅನ್ನು ಕೊಡುಗೆಯಾಗಿ ನೀಡಿದ್ದರು.

Leave a Reply