Featured

ತಿರುಪತಿ ದೇವಸ್ಥಾನದ ಪುರೋಹಿತನ ಮನೆ ಮೇಲೆ ಐಟಿ ದಾಳಿ : ಇಲ್ಲಿದೆ ವೈರಲ್ ಸುದ್ದಿಯ ಹಿಂದಿರುವ ಅಸಲಿಯತ್ತು – Vishwanews24

ತಿರುಪತಿ ದೇವಸ್ಥಾನದ ಪುರೋಹಿತನ ಮನೆ ಮೇಲೆ ಐಟಿ ದಾಳಿ : ಇಲ್ಲಿದೆ ವೈರಲ್ ಸುದ್ದಿಯ ಹಿಂದಿರುವ ಅಸಲಿಯತ್ತು – Vishwanews24

 ತಿರುಮಲ:  ತಿರುಮಲ ತಿರುಪತಿಯ ವೆಂಕಟೇಶ್ವರ ದೇವಾಲಯದ 16 ಪುರೋಹಿತರಲ್ಲಿ ಒಬ್ಬ ಪುರೋಹಿತರ ಮನೆಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ಮನೆಯಲ್ಲಿ ಅಪಾರ ನಗದು, ಚಿನ್ನ, ವಜ್ರಾಭರಣಗಳು ಪತ್ತೆಯಾಗಿರುವ ಸುದ್ದಿ ಹರಿದಾಡುತ್ತಿದೆ.

ಮಾಹಿತಿ ಪ್ರಕಾರ, ‘ತಿರುಪತಿ ತಿಮ್ಮಪ್ಪನ ಸೇವೆ ಮಾಡುವ 16 ಪುರೋಹಿತರಲ್ಲಿ ಒಬ್ಬ ಪುರೋಹಿತರ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ 128 ಕೆ.ಜಿ ಚಿನ್ನ, 150 ಕೋಟಿ ರೂಪಾಯಿ ನಗದು, 70 ಕೋಟಿ ರೂಪಾಯಿ ಬೆಲೆಯ ವಜ್ರ ಸಿಕ್ಕಿದೆ ಎಂದಿದೆ. ಇದರ ಸತ್ಯಾಸತ್ಯತೆಯನ್ನು ಅರಿಯದೇ ಇನ್ನುಮುಂದೆ ಯಾರೂ ತಿರುಪತಿಗೆ ಕಾಣಿಕೆ ಸಲ್ಲಿಸಬೇಡಿ ಎಂದೂ ಅದರಲ್ಲಿ ಬರೆಯಲಾಗಿದೆ. ಯೂಟ್ಯೂಬ್‌ನಲ್ಲಿ ಕೂಡ ಈ ವಿಡಿಯೋ ಹರಿದಾಡುತ್ತಿದೆ.

ಆದರೆ ನಿಜವಾಗಿಯೂ ಹೀಗೆ ರೇಡ್‌ ಆಗಿದ್ದು ಹೌದಾ? ಇಷ್ಟು ಬೆಲೆಬಾಳುವ ಆಭರಣ, ನಗದು ಪುರೋಹಿತನ ಮನೆಯಲ್ಲಿ ಸಿಕ್ಕಿದ್ದು ನಿಜನಾ ಎಂಬ ಬಗ್ಗೆ ಫ್ಯಾಕ್ಟ್‌ಚೆಕ್‌ ಮಾಡಿದಾಗ ಸಿಕ್ಕಿದ್ದೇ ಬೇರೆ ವಿಷಯ. ಅದೇನೆಂದರೆ ಇದು ಸುಳ್ಳು ಸುದ್ದಿ. ಯಾವುದೇ ಪುರೋಹಿತನ ಮನೆಯಲ್ಲಿ ದಾಳಿಯೂ ಆಗಲಿಲ್ಲ, ಇವೆಲ್ಲಾ ಸಿಕ್ಕಿಯೂ ಇಲ್ಲ.

ಅಸಲಿಗೆ ಈ ವಿಡಿಯೋ ತಮಿಳುನಾಡಿನಲ್ಲಿ ನಡೆದ ಚಿನ್ನಾಭರಣಗಳ ಅಂಗಡಿಯ ದರೋಡೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿರುವ ನಗದು, ಚಿನ್ನಾಭರಣಗಳದ್ದಾಗಿದೆ. ತಮಿಳುನಾಡಿನ ವೆಲ್ಲೂರಿನಲ್ಲಿ ಇರುವ ಜೋಸ್‌ ಅಲುಕ್ಕಾಸ್‌ ಷೋರೂಂನಲ್ಲಿ ಡಿ.14ರಂದು ನಡೆದಿದ್ದ ದರೋಡೆಗೆ ಸಂಬಂಧಿಸಿದಂತೆ ಆರೋಪಿಗಳಿಂದ ಇದನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಇದರ ವರದಿಯನ್ನು ತಮಿಳುನಾಡಿನ ಟೀವಿ ಚಾನೆಲ್‌ ‌ಗಳಲ್ಲಿ ಇದೇ ಡಿಸೆಂಬರ್‌ 22ರಂದು ಪ್ರಸಾರವಾಗಿತ್ತು.

ಆರೋಪಿಗಳು ಸ್ಮಶಾನದಲ್ಲಿ ಹೂತಿಟ್ಟಿದ್ದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಡೀಕಾರಾಮನ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಯುತ್ತಿದೆ. ಈ ವಿಡಿಯೋದಲ್ಲಿ ವಶಪಡಿಸಿಕೊಂಡಿರುವ 15 ಕೆಜಿ ಚಿನ್ನ ಮತ್ತು ಸುಮಾರು 500 ಗ್ರಾಂ ವಜ್ರಗಳನ್ನು ಪೊಲೀಸರು ಪ್ರದರ್ಶಿಸುತ್ತಿದ್ದಾರೆ. ಆದರೆ ಇದೇ ವಿಡಿಯೋ ಇಟ್ಟುಕೊಂಡು ತಿರುಪತಿಯ ಪುರೋಹಿತರ ಮನೆಯಲ್ಲಿ ನಡೆದ ದಾಳಿ ಎಂಬ ಸುದ್ದಿ ಹರಿಬಿಡಲಾಗಿದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago