Featured

ತಿರುಪತಿ ಪ್ರಸಾದ ಪ್ರಕರಣ : ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೊಳಪಡಿಸಿ : ಸರ್ಕಾರಕ್ಕೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಧಾರ್ಮಿಕ ಟ್ರಸ್ಟ್ ಗೆ ಬೇಡ  ಹಿಂದೂಯೇತರರ ನೇಮಕ: ಸರ್ಕಾರಕ್ಕೆ ಪ್ರಲ್ಹಾದ ಜೋಶಿ ಆಗ್ರಹ

ನವದೆಹಲಿ: ತಿರುಪತಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೆ ಒಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿ, ತಿರುಪತಿ ಪ್ರಸಾದದ ವಿಚಾರವಾಗಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದರು.

ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನು ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು ಎಂದು ಸಚಿವರು ಅಭಿಪ್ರಾಯಿಸಿದರು. ಹಿಂದೂಗಳ ಪವಿತ್ರ ಕ್ಷೇತ್ರವಾದ ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಜಾನುವಾರುಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸುತ್ತಿದ್ದರು!? ಎಂಬ ಸಂಗತಿ ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ ಎಂದು ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರ ಅವಧಿಯಲ್ಲಿ ಈ ರೀತಿ ಹಲವು ಹಿಂದೂ ವಿರೋಧಿ ಕ್ರಮಗಳಿಗೆ ಬೆಂಬಲವಾಗಿ ನಿಂತಿರುವುದು ಅಕ್ಷಮ್ಯ ಎಂದು ಪ್ರತಿಕ್ರಿಯಿಸಿದ್ದಾರೆ. ಅಷ್ಟೇ ಅಲ್ಲ, ತಿರುಮಲ ತಿರುಪತಿಯ ಟ್ರಸ್ಟ್ ನಲ್ಲಿ ಜಗನ್ ರೆಡ್ಡಿ ಅವರು ಹಿಂದೂಯೇತರರನ್ನೂ ಟ್ರಸ್ಟ್ ಸದಸ್ಯರನ್ನಾಗಿ ಮಾಡಿದ್ದರು ಎಂದು ಜೋಶಿ ಆರೋಪಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಮತ್ತೆ ಈ ರೀತಿಯ ವಿಚಾರಗಳು ಮರುಕಳಿಸಬಾರದು. ಆ ನಿಟ್ಟಿನಲ್ಲಿ ನೂತನ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸದಾ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಕರ್ನಾಟಕದಲ್ಲೂ ಎಚ್ಚರ ವಹಿಸಿ: ಆಂಧ್ರಪ್ರದೇಶ ಪ್ರಕರಣದಿಂದ ಕರ್ನಾಟಕ ಸಹ ಎಚ್ಚೆತ್ತುಕೊಳ್ಳಬೇಕು. ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದಗಳನ್ನ ತ್ವರಿತವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಸಚಿವ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಧಾರ್ಮಿಕ ಟ್ರಸ್ಟ್ ಗೆ ಬೇಡ  ಹಿಂದೂಯೇತರರ ನೇಮಕ: ಹಿಂದೂ ಧಾರ್ಮಿಕ ಟ್ರಸ್ಟ್ ಗಳಲ್ಲಿ ಹಿಂದೂಯೇತರರನ್ನು ನೇಮಕ ಮಾಡಬಾರದು ಎಂದೂ ಸಚಿವ ಪ್ರಲ್ಹಾದ ಜೋಶಿ ಸರ್ಕಾರಕ್ಕೆ ಆಗ್ರಹಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago