Featured

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ : ಪ್ರಯೋಗಾಲಯ ವರದಿ – vishwanews24

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ ; ಪ್ರಯೋಗಾಲಯ ವರದಿ

ತಿರುಪತಿ: ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದನ್ನು ಗುಜರಾತ್ ಮೂಲದ ಜಾನುವಾರು ಪ್ರಯೋಗಾಲಯ, NDDB CALF Ltd ದೃಢಪಡಿಸಿದೆ ಎಂದು ಆಡಳಿತಾರೂಢ ತೆಲುಗು ದೇಶಂ ಪಕ್ಷ(ಟಿಡಿಪಿ) ಹೇಳಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಯೋಗಾಲಯದ ವರದಿಯನ್ನು ಪ್ರದರ್ಶಿಸಿದ ಟಿಡಿಪಿ ವಕ್ತಾರ ಆನಂ ವೆಂಕಟ ರಮಣ ರೆಡ್ಡಿ ಅವರು, ತಿರುಪತಿಯ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಇರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಇದರಲ್ಲಿ ಹಂದಿಯ ಕೊಬ್ಬು, ದನದ ಕೊಬ್ಬು,ಪಾಮಾಯಿಲ್,ಸೋಯಾಬಿನ್,ಸೂರ್ಯಕಾಂತಿ ಎಣ್ಣೆ, ಮೆಕ್ಕೆ ಜೋಳ ಎಣ್ಣೆ ಬೆರೆಸಿದ ಕಡಿಮೆ ಗುಣಮಟ್ಟದ ತುಪ್ಪ ಬಳಕೆ ಮಾಡಲಾಗುತ್ತಿದೆ ಎಂದು ಖಚಿತವಾಗಿದೆ ಎಂದರು.

ಪ್ರಯೋಗಾಲಯದ ವರದಿಯು ತುಪ್ಪದ ಮಾದರಿಯಲ್ಲಿ “ದನದ ಕೊಬ್ಬು” ಇರುವಿಕೆಯನ್ನು ದೃಢಪಡಿಸಿದೆ ಎಂದು ಹೇಳಿದ್ದಾರೆ.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಆರೋಪಿಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಿರುಪತಿಯ ಭಕ್ತರ ನಂಬಿಕೆಗೆ ಚಂದ್ರಬಾಬು ನಾಯ್ಡು ಅವರ ಹೇಳಿಕೆ ಧಕ್ಕೆ ತಂದಿದೆ ಎಂದು ಟಿಟಿಡಿ ಅಧಿಕಾರಿಗಳು ವಾದಿಸಿದ್ದರು. ಆದರೆ, ಚಂದ್ರಬಾಬು ನಾಯ್ಡು ಅವರ ಆರೋಪ ಸತ್ಯ ಎಂಬುದು ಇದೀಗ ಬಂದಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

19 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

19 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

19 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

22 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

22 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

22 hours ago