ಆಂಧ್ರಪ್ರದೇಶ: ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ತೆರಳಿ ದೇವರ ದರ್ಶನ ಪಡೆದಿದ್ದಾರೆ.
ತಿರುಮಲ ಒಂದು ಪವಿತ್ರ ದೇವಸ್ಥಾನವಾಗಿದ್ದು ಇಲ್ಲಿನ ಪಾವಿತ್ರ್ಯತೆ ಕಾಪಾಡಬೇಕಾಗಿದೆ. ಹಾಗಾಗಿ ಇನ್ಮುಂದೆ ದೇವಸ್ಥಾನದಲ್ಲಿ ‘ಏಕಕುಂಡಲವಾಡ ಸ್ವಾಮಿ ಗೋವಿಂದ.. ಗೋವಿಂದ ‘ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಅವರು ತಿರುಮಲ ಬೆಟ್ಟದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಇನ್ನು ಮುಂದೆ ಬೆಟ್ಟದಲ್ಲಿ ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು. ಕೇವಲ ‘ಗೋವಿಂದ.. ಗೋವಿಂದ’ ಎಂಬ ಘೋಷ ಮಾತ್ರ ಕೇಳಿಬರಬೇಕು. ಇದು ಹಿಂದೂಗಳ ಪವಿತ್ರ ದೇವಸ್ಥಾವಾಗಿದ್ದು ಇಲ್ಲಿನ ಪಾವಿತ್ರ್ಯತೆಯನ್ನು ನಾವು ಕಾಪಾಡಬೇಕು. ಇಲ್ಲಿಗೆ ಬರುವ ಭಕ್ತರಿಗೆ ದೇವರ ದರ್ಶನ ಹಾಗೂ ಶಾಂತಿಯುವಾದ ವ್ಯವಸ್ಥೆಯನ್ನು ಕಲ್ಪಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.
ಕಳೆದ ಐದು ವರ್ಷಗಳಲ್ಲಿ ಪವಿತ್ರ ದೇವಾಲಯದ ಪಾವಿತ್ರ್ಯತೆ ಹಾಳಾಗಿದೆ, ಶಕ್ತಿಶಾಲಿಗಳ ಮನೆ ಬಾಗಿಲಿಗೆ ದೇವರನ್ನು ಕೊಂಡೊಯ್ಯುವುದನ್ನು ಎಂದಾದರೂ ನೀವು ಕೇಳಿದ್ದೀರಾ. ಇಲ್ಲಿ ಡ್ರಗ್ಸ್, ಮದ್ಯ ಮಾಂಸ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು, ಕಳೆದ ಐದು ವರ್ಷಗಳಲ್ಲಿ ಬೆಟ್ಟದಲ್ಲಿ ಆಹಾರದ ಗುಣಮಟ್ಟವೂ ಹದಗೆಟ್ಟಿದೆ, ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…