Featured

ತಿರುಮಲ ಬ್ರಹ್ಮೋತ್ಸವ ಸಂಭ್ರಮ : ಘಾಟ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧ – vishwanews24

ತಿರುಮಲ ಬ್ರಹ್ಮೋತ್ಸವ ಸಂಭ್ರಮ : ಘಾಟ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರ ನಿಷೇಧ

ತಿರುಪತಿ: ತಿರುಮಲದಲ್ಲಿ ವಾರ್ಷಿಕ ಸಲಕಟ್ಲ ಬ್ರಹ್ಮೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಲಕ್ಷಾಂತರ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ತಿರುಮಲ ತಿರುಪತಿ ದೇವಸ್ಥಾನ ಹಾಗೂ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.

ತಿರುಮಲದ ಎರಡೂ ಘಾಟ್ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣ ನಿಷೇಧಿಸಲಾಗಿದೆ. ಸೆ.18ರ ರಾತ್ರಿ 9 ಗಂಟೆಯಿಂದ ಸೆ.20ರ ಬೆಳಗ್ಗೆ 6 ಗಂಟೆಯವರೆಗೆ ಬೈಕ್ ಸೇರಿದಂತೆ ಯಾವುದೇ ದ್ವಿಚಕ್ರ ವಾಹನಗಳಿಗೆ ಘಾಟ್ ರಸ್ತೆಯಲ್ಲಿ ಪ್ರವೇಶ ಇರುವುದಿಲ್ಲ.

ಬೈಕ್‌ನಲ್ಲಿ ತಿರುಮಲಕ್ಕೆ ತೆರಳುವ ಭಕ್ತರು ತಮ್ಮ ವಾಹನಗಳನ್ನು ಕೆಳ ತಿರುಪತಿಯಲ್ಲೇ ನಿಲುಗಡೆ ಮಾಡಿ, ಅಲ್ಲಿಂದ ಆರ್‌ಟಿಸಿ ಬಸ್ ಅಥವಾ ಇತರ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸುವಂತೆ TTD ಮನವಿ ಮಾಡಿದೆ. ಬ್ರಹ್ಮೋತ್ಸವದ ಪ್ರಮುಖ ಘಟ್ಟವಾದ ‘ಗರುಡ ಸೇವೆ’ ಸೆ.19ರಂದು ನಡೆಯಲಿದ್ದು, ಮಲಯಪ್ಪ ಸ್ವಾಮಿ ಗರುಡ ವಾಹನಾರೂಢರಾಗಿ ತಿರುಮಲದ ನಾಲ್ಕು ಮಾಡ ಬೀದಿಗಳಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಗರುಡ ಸೇವೆಯ ದರ್ಶನಕ್ಕಾಗಿ ದೇಶದ ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ತಿರುಮಲದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ದ್ವಿಚಕ್ರ ವಾಹನಗಳಿಗಾಗಿ ಬಾಲಾಜಿ ಲಿಂಕ್ ಬಸ್ ನಿಲ್ದಾಣ, ನೆಹರು ಮುನ್ಸಿಪಲ್ ಮೈದಾನ, ಎಸ್‌ವಿ ವೈದ್ಯಕೀಯ ಕಾಲೇಜು ಮೈದಾನ ಹಾಗೂ ಇಸ್ಕಾನ್ ಮೈದಾನಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಾರ್ ಮತ್ತು ವ್ಯಾನ್‌ಗಳಿಗೆ ಅಲಿಪಿರಿ ಲಿಂಕ್ ಬಸ್ ನಿಲ್ದಾಣ, ಎಸ್‌ವಿ ವೈದ್ಯಕೀಯ ಕಾಲೇಜು ಮೈದಾನ, ಎಸ್‌ವಿ ಎಂಜಿನಿಯರಿಂಗ್ ಕಾಲೇಜು ಮೈದಾನ ಹಾಗೂ ಭಾರತೀಯ ವಿದ್ಯಾ ಭವನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಸಿ ಬಸ್‌ಗಳನ್ನು ಮಾವಿನ ಮಾರುಕಟ್ಟೆ, ಟ್ರೈಡೆಂಟ್ ಹಾಗೂ ದೇವಲೋಕ್ ಬಳಿ ನಿಲುಗಡೆ ಮಾಡಲು ಸೂಚಿಸಲಾಗಿದೆ.

ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಿರುಪತಿಗೆ ಆಗಮಿಸುವ ವಿವಿಧ ಮಾರ್ಗಗಳಲ್ಲೂ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಹೆಚ್ಚಿನ ದಟ್ಟಣೆ ಉಂಟಾಗುವ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಲಕಟ್ಲ ಬ್ರಹ್ಮೋತ್ಸವವು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯಲು ಭಕ್ತರು ಸಂಚಾರ ನಿಯಮಗಳನ್ನು ಪಾಲಿಸಿ, TTD ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ತಿರುಪತಿ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

Vishwa News 24

Recent Posts

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

21 minutes ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

29 minutes ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 hours ago

ಮಂಗಳೂರು:  ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ – vishwanews24

ಮಂಗಳೂರು:  ಜನಾರ್ದನ ಪೂಜಾರಿ ನಿವಾಸಕ್ಕೆ ಸಿಎಂ ಡಿ ಕೆ ಶಿವಕುಮಾರ್ ಭೇಟಿ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರದ…

2 hours ago

ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಅಂದಾಜು 10-15 ಲಕ್ಷ ರೂ. ನಷ್ಟ – vishwanews24

ಕಟಪಾಡಿ: ತೆಂಗಿನಕಾಯಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; 10-15 ಲಕ್ಷ ರೂ. ನಷ್ಟ ಉಡುಪಿ: ಕಾಪು ತಾಲೂಕಿನ ಕಟಪಾಡಿ ಸಮೀಪದ…

2 hours ago

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಸಿಎಂ – vishwanews24

ಮಂಗಳೂರು : ಮೀನುಗಾರಿಕೆ ಧಕ್ಕೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ಸಿಎಂ ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago