ಮಂಗಳೂರು: ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಿ ರೈಲ್ವೆ ಮಂಡಳಿ ಆದೇಶ ಹೊರಡಿಸಿದೆ.
ಹೊಸ ವೇಳಾ ಪಟ್ಟಿಯ ಪ್ರಕಾರ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 6.15ಕ್ಕೆ ಹೊರಟು ಮಧ್ಯಾಹ್ನ 3.05 ಕ್ಕೆ ತಿರುವನಂತಪುರವನ್ನು ತಲುಪಲಿದೆ.
ತಿರುವನಂತಪುರದಿಂದ ಸಂಜೆ 4.05 ಕ್ಕೆ ಹೊರಟು ರಾತ್ರಿ 12.40ಕ್ಕೆ ಮಂಗಳೂರನ್ನು ತಲುಪಲಿದೆ. ಬುಧವಾರ ಹೊರತು ಪಡಿಸಿ ವಾರ ಆರು ದಿನಗಳೂ ಈ ರೈಲು ಸಂಚರಿಸಲಿದೆ.
‘ನನ್ನ ಕೋರಿಕೆಯನ್ನು ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರಿನವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…