ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೋಮವಾರ ತಿಹಾರ್ ಜೈಲಿಗೆ ತೆರಳಿದ್ದರು. ಅಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಆ.21ರಂದು ಬಂಧಿಸಿದ್ದರು. ಸೋನಿಯಾ ಹಾಗೂ ಮನಮೋಹನ್ ಸಿಂಗ್ ಅವರ ಜತೆ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಕೂಡ ಇದ್ದರು ಎನ್ನಲಾಗಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಇದಕ್ಕಾಗಿ ಅದು ಪಿ. ಚಿದಂಬರಂ ಅವರನ್ನು ಅನಗತ್ಯವಾಗಿ ಬಂಧಿಸಿದೆ ಎಂದು ಕಾಂಗ್ರೆಸ್ ಮೊದಲಿನಿಂದಲೂ ಪ್ರತಿಪಾದಿಸುತ್ತಿದೆ.
ಜಾಮೀನು ಕೋರಿ ದೆಹಲಿ ಹೈಕೋರ್ಟ್ಗೆ ಚಿದಂಬರಂ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಬಿಐ, ಸರ್ಕಾರದ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಇದರಿಂದ ತೀವ್ರ ಹಿನ್ನಡೆಯಾಗುತ್ತದೆ ಎಂದು ಹೇಳಿದ್ದಾರೆ. ಸೋಮವಾರ ಈ ಅರ್ಜಿಯ ವಿಚಾರಣೆ ನಿಗದಿಯಾಗಿದೆ.
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಸೆರೆವಾಸದಲ್ಲಿದ್ದರೆ, ಜೊತೆಗೆ ಕರ್ನಾಟಕದ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಇಬ್ಬರೂ ಒಂದೇ ಕಾರಾಗೃಹದಲ್ಲಿದ್ದಾರೆ. ಇಬ್ಬರ ವಿರುದ್ಧವೂ ಇಡಿ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಪಿ.ಚಿದಂಬರಂ ಅವರನ್ನು ಭೇಟಿಯಾಗಿ ಮನಮೋಹನ್ ಸಿಂಗ್ ಹಾಗೂ ಸೋನಿಯಾ ಗಾಂಧಿ ಅವರ ಜೊತೆ ಮಾತುಕತೆ ನಡೆಸಿ, ನಿಮ್ಮ ಜತೆ ನಾವಿದ್ದೇವೆ ಎಂದು ಹೇಳುವ ಮೂಲಕ ಆತ್ಮಸ್ಥೈರ್ಯ ತುಂಬಿದ್ದಾರೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…