ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ಸುರೇಶ್ ಕುಮಾರ್ ಅವರನ್ನು ದಾಖಲಿಸಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.
ಸುರೇಶ್ ಕುಮಾರ್ ಅವರಿಗೆ ಮೆದುಳಿಗೆ ಜ್ವರ ತಗುಲಿದೆ ಎನ್ನಲಾಗುತ್ತಿದೆ. ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್ ಪ್ರಯಾಣ ಬೆಳೆಸಿದ್ದ ಸುರೇಶ್‌ಕುಮಾರ್ ಬಳಿಕ ದೋಸ್ತಿ ಪಾದಯಾತ್ರೆಯಲ್ಲೂ ಒಂದು ದಿನ ಭಾಗಿಯಾಗಿದ್ದರು. ಆದರೆ ಇದೀಗ ಕಳೆದ 3-4 ದಿನಗಳ ಹಿಂದೆ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು.
ನಿನ್ನೆ ರಾತ್ರಿ ಜ್ವರ ತೀವ್ರಗೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…