Featured

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗು ಸ್ಥಳದಲ್ಲೇ ಸಾವು – vishwanews24

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗು ಸ್ಥಳದಲ್ಲೇ ಸಾವು

ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ವೈಟ್ ಫೀಲ್ಡ್ ಬಳಿಯ ಕಾಡುಗೊಡಿಯಲ್ಲಿ ನಡೆದಿದೆ.

ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ ಮೃತಪಟ್ಟ ತಾಯಿ-ಮಗು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ದೀಪಾವಳಿ ಹಬ್ಬಕ್ಕೆ ಚೆನ್ನೈಗೆ ಹೋಗಿದ್ದ ಸೌಂದರ್ಯ, ಪತಿ ಸಂತೋಷ್ ಹಾಗೂ 9 ತಿಂಗಳ ಕಂದಮ್ಮ ಲಿಯಾ ಇಂದು ಮುಂಜಾನೆ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ದಾರಿಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಅದನ್ನು ಸೌಂದರ್ಯ ತುಳಿದಿದ್ದರು. ಈ ವೇಳೆ ಪತಿ ಸಂತೋಷ್ ಕೈಗೆ ವಿದ್ಯುತ್ ಶಾಕ್ ಹೊಡೆದು ಅದೃಷ್ಟವಶಾತ್ ಅವರು ಪಕ್ಕಕ್ಕೆ ಬಿದ್ದಿದ್ದರು. ಆದರೆ ಪತಿ ಎದುರೇ ಪತ್ನಿ ಹಾಗೂ ಕಂದಮ್ಮ ವಿದ್ಯುತ್ ಶಾಕ್‌ಗೆ ಸುಟ್ಟು ಕರಕಲಾಗಿದ್ದಾರೆ.ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಸ್ಕಾಂ ಎಇ ಚೇತನ್, ಎಇಇ ಸುಬ್ರಮಣಿ ಹಾಗೂ ಇಇ ಶ್ರೀ ರಾಮನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago