ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ದಾರುಣ ಘಟನೆ ವೈಟ್ ಫೀಲ್ಡ್ ಬಳಿಯ ಕಾಡುಗೊಡಿಯಲ್ಲಿ ನಡೆದಿದೆ.
ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ ಮೃತಪಟ್ಟ ತಾಯಿ-ಮಗು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ದೀಪಾವಳಿ ಹಬ್ಬಕ್ಕೆ ಚೆನ್ನೈಗೆ ಹೋಗಿದ್ದ ಸೌಂದರ್ಯ, ಪತಿ ಸಂತೋಷ್ ಹಾಗೂ 9 ತಿಂಗಳ ಕಂದಮ್ಮ ಲಿಯಾ ಇಂದು ಮುಂಜಾನೆ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ದಾರಿಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೇ ಅದನ್ನು ಸೌಂದರ್ಯ ತುಳಿದಿದ್ದರು. ಈ ವೇಳೆ ಪತಿ ಸಂತೋಷ್ ಕೈಗೆ ವಿದ್ಯುತ್ ಶಾಕ್ ಹೊಡೆದು ಅದೃಷ್ಟವಶಾತ್ ಅವರು ಪಕ್ಕಕ್ಕೆ ಬಿದ್ದಿದ್ದರು. ಆದರೆ ಪತಿ ಎದುರೇ ಪತ್ನಿ ಹಾಗೂ ಕಂದಮ್ಮ ವಿದ್ಯುತ್ ಶಾಕ್‌ಗೆ ಸುಟ್ಟು ಕರಕಲಾಗಿದ್ದಾರೆ.ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಸ್ಕಾಂ ಎಇ ಚೇತನ್, ಎಇಇ ಸುಬ್ರಮಣಿ ಹಾಗೂ ಇಇ ಶ್ರೀ ರಾಮನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…