ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಕೈ’ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮುದ್ದಹನುಮೇಗೌಡ…- Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ರಾಜಕೀಯ ಅಖಾಡ ಮತ್ತಷ್ಟು ರಂಗರೇಲಿದ್ದು , ಇಂದುಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಹಾಲಿ ಸಂಸದ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ರಾಜಕೀಯ ಅಖಾಡ ಮತ್ತಷ್ಟು ರಂಗೇರಲಿದೆ. ಇನ್ನು ತುಮಕೂರು ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸುತ್ತಿದ್ದು ದೇವೇಗೌಡರಿಗೆ ಸೆಡ್ಡು ಹೊಡೆದು ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹಾಲಿ ಸಂಸದ ಮುದ್ದಹನುಮೇಗೌಡ ಅವರನ್ನು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಆದರೆ ಆ ಅಫರ್ ಅನ್ನ ತಿರಸ್ಕರಿಸಿದ ಮುದ್ದಹನುಮೇಗೌಡ ತುಮಕೂರಿನಿಂದಲೇ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್, ಹಾಲಿ ಸಂಸದರಿಗೆ ಆಫರ್ ನೀಡಲಾಗಿತ್ತು. ಅಲ್ಲಿ ನಿಮ್ಮನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ದಿನೇಶ್ ಗುಂಡೂರಾವ್ ಆಫರ್ ನೀಡಿದ್ದರು ಎನ್ನಲಾಗಿದೆ.