Featured

ತುಮಕೂರು : ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ ಭೀಕರ ರಸ್ತೆ ಅಪಘಾತ ; ಬಾಲಕಿ ಸೇರಿ ನಾಲ್ವರು ಸಾವು – vishwanews24

ತುಮಕೂರು : ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ ಭೀಕರ ರಸ್ತೆ ಅಪಘಾತ ;ಬಾಲಕಿ ಸೇರಿ ನಾಲ್ವರು  ಸಾವು

ತುಮಕೂರು: ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಮುಗಿಸಿ ವಾಪಸ್ ಕೊಪ್ಪಳಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಏಳು ವರ್ಷದ ಬಾಲಕಿ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮುಂಜಾನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾವಿ ಕ್ರಾಸ್ ಬಳಿ ಸಂಭವಿಸಿದೆ.

ಕೊಪ್ಪಳ ಜಿಲ್ಲೆಯ ಕುಕ್ಕನೂರು ಹಾಗೂ ಗದ್ದಿಗೆರೆ ತಾಂಡಾದ ಒಟ್ಟು 10 ಮಂದಿ ಮಾಲಾಧಾರಿಗಳು ಜನವರಿ 5ರಂದು ಶಬರಿಮಲೆಗೆ ತೆರಳಿದ್ದರು. ಬುಧವಾರ ಅಯ್ಯಪ್ಪ ಸ್ವಾಮಿಯ ದರ್ಶನ ಮುಗಿಸಿದ ಅವರು, ಗುರುವಾರ ಮಧ್ಯಾಹ್ನ ತಮಿಳುನಾಡಿನ ಪಳನಿ ದೇವಸ್ಥಾನಕ್ಕೆ ಭೇಟಿ ನೀಡಿ, ಅಲ್ಲಿಂದ ಬೆಂಗಳೂರು ಮಾರ್ಗವಾಗಿ ಕೊಪ್ಪಳಕ್ಕೆ ಮರಳುತ್ತಿದ್ದರು. ಈ ವೇಳೆ ಇಂದು ಬೆಳಗಿನ ಜಾವ ಸುಮಾರು 5.30ರ ವೇಳೆಗೆ ಬೆಳ್ಳಾವಿ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಇವರಿದ್ದ ಕ್ರೂಸರ್ ವಾಹನವು ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದಿದೆ.

ಈ ಭೀಕರ ಅಪಘಾತದಲ್ಲಿ ಸಾಕ್ಷಿ (7), ಮಾರುತಪ್ಪ (45), ವೆಂಕಟೇಶ್ (30) ಹಾಗೂ ಗವಿಸಿದ್ದಪ್ಪ (28) ಎಂಬ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರೆಲ್ಲರೂ ಕೊಪ್ಪಳ ಜಿಲ್ಲೆಯ ಮೂಲದವರಾಗಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಅಪಘಾತದ ತೀವ್ರತೆಯಿಂದ ಕ್ರೂಸರ್ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ಸಾಕ್ಷಿಯ ತಂದೆ ಹುಲಿಗಪ್ಪ ಅವರ ಅಳಲು ಮನಕಲಕುವಂತಿತ್ತು. “ಮಗಳು ನನ್ನ ಪಕ್ಕದಲ್ಲೇ ಮಲಗಿದ್ದಳು. ಅಪಘಾತ ಹೇಗೆ ನಡೆಯಿತು ಎಂಬುದೇ ಗೊತ್ತಾಗಲಿಲ್ಲ. ಒಂದನೇ ತರಗತಿ ಓದುತ್ತಿದ್ದ ಮಗಳಿಗೆ ಒಳ್ಳೆಯದಾಗಲಿ ಎಂದು ಎರಡನೇ ಬಾರಿ ಶಬರಿಮಲೆಗೆ ಕರೆದೊಯ್ದಿದ್ದೆ. ದೇವರು ಇಂತಹ ಶಿಕ್ಷೆ ನೀಡಬಾರದಿತ್ತು” ಎಂದು ಅವರು ಕಣ್ಣೀರಿಟ್ಟಿದ್ದಾರೆ.

ವಾಹನದಲ್ಲಿದ್ದ ಚಾಲಕ ಸೇರಿದಂತೆ ಶ್ರೀನಾಥ್, ಪ್ರದೀಪ್ ಕುಮಾರ್, ರಾಜಪ್ಪ, ಹುಲಿಗಪ್ಪ, ರಾಕೇಶ್, ತಿರುಪತಿ, ಶ್ರೀನಿವಾಸ್ ಹಾಗೂ ಪ್ರವೀಣ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳು ರಾಜಪ್ಪ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಘಟನೆಯ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶಬರಿಮಲೆ ದರ್ಶನದಿಂದ ಹಿಂದಿರುಗುತ್ತಿದ್ದ ಕುಟುಂಬಗಳಲ್ಲಿ ಸಂಭವಿಸಿದ ಈ ದುರ್ಘಟನೆ, ಮೃತರ ಕುಟುಂಬಗಳಿಗೆ ಅಳಲಿನ ಛಾಯೆಯನ್ನು ಮೂಡಿಸಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago