ತುಮಕೂರು : ಏ.1 ರಂದು ಶ್ರೀಗಳ 115ನೇ ಜನ್ಮ ದಿನ ; ಅಮಿತ್ ಶಾ ಕಾರ್ಯಕ್ರಮ ಉದ್ಘಾಟನೆ – Vishwanews24
ಏ.1 ರಂದು ಶ್ರೀಗಳ 115ನೇ ಜನ್ಮ ದಿನ ; ಅಮಿತ್ ಶಾ ಕಾರ್ಯಕ್ರಮ ಉದ್ಘಾಟನೆ
ತುಮಕೂರು: ಕಾಯಕಯೋಗಿ, ತ್ರಿವಿಧ ದಾಸೋಹಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ಲಿಂಗೈಕ್ಯರಾಗಿ ಮೂರು ವರ್ಷ ಕಳೆದಿವೆ. ಶ್ರೀಗಳ 115ನೇ ಜನ್ಮ ದಿನೋತ್ಸವಕ್ಕೆ ಸಿದ್ದಗಂಗಾ ಮಠದಲ್ಲಿ ಭರ್ಜರಿ ಸಿದ್ದತೆ ನಡೆಯುತ್ತಿದೆ.
ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜಯಂತ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರೀಗಳ 115ನೇ ಜನ್ಮ ದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸರಿಸುಮಾರು 2-3 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ವೇದಿಕೆಗೆ ‘ನಡೆದಾಡುವ ಬಸವ ಭಾರತ’ ಅಂತ ಹೆಸರಿಡಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದು, ಸುತ್ತೂರು ಶ್ರೀಗಳು, ಸಿಎಂ ಬೊಮ್ಮಾಯಿ ಸೇರಿ ಹಲವರು ಭಾಗಿ ಆಗಲಿದ್ದಾರೆ. ಈ ನಡುವೆ ಇಂದೇ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4ಕ್ಕೆ ಬರಲಿರುವ ರಾಹುಲ್ ಗಾಂಧಿ ಗದ್ದುಗೆ ದರ್ಶನ ಬಳಿಕ ಸಿದ್ದಲಿಂಗ ಸ್ವಾಮಿಜಿಗಳ ಆಶೀರ್ವಾದ ಪಡೆಯಲಿದ್ದಾರೆ.
