ತುಮಕೂರು: ಸ್ಕೂಟರ್ ನಲ್ಲಿ ಕ್ಯಾನ್ ಇಟ್ಟು ಅದಕ್ಕೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಹೊತ್ತಿಕೊಂಡ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಮೃತಳನ್ನು 18 ವರ್ಷದ ಭವ್ಯ ಎಂದು ಗುರುತಿಸಲಾಗಿದ್ದು, ಆಕೆಯ ತಾಯಿ ರತ್ನಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ. ಬೆಂಕಿ ಹತ್ತಿಕೊಂಡು ಸ್ಕೂಟಿ ಸ್ಫೋಟಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿರಾ ತಾಲ್ಲೂಕಿನ ಜವನಹಳ್ಳಿ ನಿವಾಸಿಗಳಾದ ತಾಯಿ ರತ್ನಮ್ಮ ಮತ್ತು ಮಗಳು ಭವ್ಯ ಪೆಟ್ರೋಲ್ ಬಂಕಿಗೆ ಬಂದಿದ್ದರು. ಸ್ಕೂಟಿ ವಾಹನದ ಮೇಲೆ ಕ್ಯಾನ್ ಇಟ್ಟು ಪೆಟ್ರೋಲ್ ತುಂಬಿಸುತ್ತಿದ್ದರು. ಭವ್ಯ ಈ ವೇಳೆ, ಸ್ಕೂಟಿಯಲ್ಲಿ ಕುಳಿತುಕೊಂಡಿದ್ದು ಬೆಂಕಿ ಮೈಗೆ ಹತ್ತಿಕೊಂಡಿದೆ. ಅಕಸ್ಮಾತ್ ಬೆಂಕಿ ಹತ್ತಿದ್ದು ಪೆಟ್ರೋಲ್ ಕ್ಯಾನ್ ಸಹಿತ ಧಗ ಧಗನೆ ಹೊತ್ತಿ ಉರಿದಿದೆ. ಭವ್ಯಾ ಬೆಂಕಿಯ ಜ್ವಾಲೆಯೊಂದಿಗೆ ಓಡಿ ಕೆಳಕ್ಕೆ ಬಿದ್ದಿದ್ದಾಳೆ.
ಬಳಿಕ ಆಕೆಯನ್ನು ಶಿರಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾಳೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ವಿಡಿಯೋ ಈಗ ವೈರಲ್ ಆಗಿದೆ. ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…