Featured

ತುಮಕೂರು : ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ನಾಳೆ ತುಮಕೂರು ಬಂದ್.. Vishwanews24

ತುಮಕೂರು : ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ನಾಳೆ ತುಮಕೂರು ಬಂದ್.. Vishwanews24

ತುಮಕೂರು: ಬಜರಂಗದಳದ ಜಿಲ್ಲಾ ಸಂಚಾಲಕ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಿರೋದನ್ನು ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳು ನಾಳೆ ತುಮಕೂರು ಬಂದ್ ಗೆ ಕರೆ ನೀಡಿದೆ.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಇತರ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬಂದ್‌ಗೆ ಕರೆ ಕೊಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಹಿಂದೂಗಳ ಮೇಲೆ ಪದೇಪದೇ ಹಲ್ಲೆ ನಡೆಯುತ್ತಿದೆ. ಗೋ ಸಂರಕ್ಷಣೆಗೆ ಮುಂದಾದವರ ಮೇಲೆ ಹಲ್ಲೆ ಮಾಡುವುದು, ಬೆದರಿಕೆ ಹಾಕುವುದು ಮುಂದುವರೆದಿದೆ. ನಗರದಲ್ಲಿ ಕಸಾಯಿ ಖಾನೆಗಳು ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ನಗರ ಶಾಸಕ ಜ್ಯೋತಿಗಣೇಶ್, ವಿಶ್ವದಲ್ಲಿ ಹಿಂದೂಗಳಿಗೆ ಮುಕ್ತವಾಗಿರುವ ದೇಶ ಅಂದರೆ ಅದು ಭಾರತ ಮಾತ್ರ. ಇಲ್ಲೂ ಈ ರೀತಿ ದೌರ್ಜನ್ಯಗಳು ನಡೆದರೆ ಹಿಂದೂಗಳನ್ನು ಅರಬ್ಬೀ ಸಮುದ್ರಕ್ಕೆ ಎಸೆಯಬೇಕಾಗುತ್ತದೆ. ಹಾಗಾಗಿ ಹಿಂದೂ ಸಮಾಜ ಒಗ್ಗಟ್ಟಾಗಿ ನಮ್ಮ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಬೇಕು ಎಂದು ಕರೆ ನೀಡಿದರು.

ಏನಿದು ಪ್ರಕರಣ?:
ಬಜರಂಗದಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ತುಮಕೂರು ನಗರದ ಗುಬ್ಬಿ ಗೇಟ್ ವೃತ್ತದಲ್ಲಿ ನಡೆದಿದೆ. ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಅವರ ಜೊತೆಯಲ್ಲಿದ್ದ ಕಿರಣ್ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಚಿಕಿತ್ಸೆಗಾಗಿ ತುಮಕೂರು ಜಿಲ್ಲೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಬ್ಬರು ಕಾರಿನಲ್ಲಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸ್ಸೋ ಇಚ್ಛೆ ರಾಡ್ ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

9 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

11 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

11 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago