ತುಮಕೂರು: ಮಹಿಳಾ PSI ಜೊತೆ ಅಸಭ್ಯ ವರ್ತನೆ, ನಿಂದನೆ ಆರೋಪ – ಯೂತ್ ಕಾಂಗ್ರೆಸ್ ಅಧ್ಯಕ್ಷನ ಬಂಧನ – Vishwanews24

Featured, ರಾಜ್ಯ ನ್ಯೂಸ್

ತುಮಕೂರು: ಮಹಿಳಾ PSI ಜೊತೆ ಅಸಭ್ಯ ವರ್ತನೆ, ನಿಂದನೆ ಆರೋಪ – ಯೂತ್ ಕಾಂಗ್ರೆಸ್ ಅಧ್ಯಕ್ಷನ ಬಂಧನ

ತುಮಕೂರು,: ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ್ದ ತುಮಕೂರು ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆಯನ್ನು ಪೊಲೀಸರು ಬಂಧಿಸಿದ್ದಾರೆ.

ತುಮಕೂರು ನಗರದ ತಿಲಕ್ ಪಾರ್ಕ್ ಮಹಿಳಾ ಪಿಎಸ್ಐ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಶಶಿ ಹುಲಿಕುಂಟೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಸೆಕ್ಸನ್ ಅಡಿ ಬಂಧಿಸಲಾಗಿದೆ.

ಪ್ರಕರಣವೊಂದರಲ್ಲಿ ವಶಕ್ಕೆ ಪಡೆದ ನಾಲ್ವರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಶಶಿ ಹುಲಿಕುಂಟೆ ಪೊಲೀಸರಿಗೆ ಧಮಕಿ ಹಾಕಿದ್ದಾನೆ. ಬಿಡಲು‌ ಸಾಧ್ಯ ಇಲ್ಲ ಎಂದಾಗ ಇನ್ನು 3 ತಿಂಗಳು ಕಾಯಿರಿ ನಮ್ಮ ಸರ್ಕಾರ ಬರುತ್ತದೆ. ಆಗ ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಆವಾಜ್ ಹಾಕಿದ್ದಾನೆ. ವಶಕ್ಕೆ ಪಡೆದ 4 ಜನರ ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲನ್ನು ಕದ್ದಿದ್ದಾರೆ ಎಂದು ಠಾಣೆ ಎದುರು ಪ್ರತಿಭಟನೆ ಮಾಡುತ್ತೇನೆ ಎಂದು ಆವಾಜ್ ಹಾಕಿದ್ದಾನೆ.

‘BSY’ ಗೆ ಇಂದು 80 ನೇ ವರ್ಷದ ಹುಟ್ಟು ಹಬ್ಬ :  ಕೇಕ್ ಕತ್ತರಿಸಿ ಸಂಭ್ರಮ – Vishwanews24

ಈ ವೇಳೆ ಶಶಿ ಹುಲಿಕುಂಟೆ ಮಾತಿಗೆ ಮಹಿಳಾ ಪಿಎಸ್‌ಐ ಪ್ರತಿರೋಧ ಒಡ್ಡಿದಾಗ, ಪಿಎಸ್ಐ ಜೊತೆ ಅಸಭ್ಯವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಠಾಣೆಯಲ್ಲಿದ್ದ 4 ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರಿಗೆ ಯಾಮಾರಿಸಿ ಎಸ್ಕೇಪ್ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಶಿ ಹುಲಿಕುಂಟೆಯನ್ನು ಐಪಿಸಿ ಸೆಕ್ಸನ್- 353, 507ರ ಅಡಿ ಬಂಧಿಸಿ 3ನೇ ಹೆಚ್ಚುವರಿ ಜೆಎಮ್‌ಎಫ್‌ಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಭಟ್ಕಳ: ನಾಲ್ವರ ಹತ್ಯೆ ಪ್ರಕರಣ; ಚಿತ್ರದುರ್ಗದಲ್ಲಿ ಪ್ರಮುಖ ಆರೋಪಿ ಪೊಲೀಸ್ ವಶಕ್ಕೆ – Vishwanews24

Leave a Reply