ತುಮಕೂರು : ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ತಮ್ಮ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಇಂದು (ಜನವರಿ 03) ಡಿಜಿ ಆದೇಶ ಹೊರಡಿಸಿದ್ದಾರೆ.
ಘಟನೆ ಹಿನ್ನೆಲೆ
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ.
ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದೀಗ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್ಪಿಯನ್ನು ಸಸ್ಪೆಂಡ್ ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…