ತುಮಕೂರು : ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿಯವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿತ್ತು. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆಗೆ ಮಾತನಾಡಿ, ಅವರ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ಸಿದ್ಧಗಂಗ ಮಠಕ್ಕೆ ಬುಧವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ತುಮಕೂರು ರೈಲ್ವೇ ನಿಲ್ದಾಣ ಸ್ವಾಮೀಜಿ ಅವರ ಹೆಸರಿನಲ್ಲಿ ಶಾಶ್ವತವಾಗಿ ಇರುತ್ತದೆ. ಅದು ನಾವು ಅವರಿಗೆ ಕೊಡುವ ಗೌರವ. ಈ ಬಗ್ಗೆ ಸೋಮಣ್ಣನವರು ಒತ್ತಾಯ ಮಾಡಿದ್ದರು. ಈಗಾಗಲೇ ರೈಲ್ವೆ ಇಲಾಖೆಯಿಂದ ಕೇಂದ್ರದಲ್ಲಿ ಮಂಜೂರು ಮಾಡಿಸಿದ್ದಾರೆ. ಶ್ರೀಗಳ ಹೆಸರಿಡಲು ತಡವಾಗಿಲ್ಲ. ಸರ್ಕಾರದಲ್ಲಿ ಕೆಲವು ಪ್ರಕ್ರಿಯೆಗಳು ಇರುತ್ತವೆ. ರಸ್ತೆ, ವೃತ್ತ, ಕಟ್ಟಡಕ್ಕೆ ಹೆಸರಿಡಬೇಕಾದರೆ ಪ್ರಸ್ತಾವನೆಗಳು ಬಂದಾಗ ಪರಿಶೀಲನೆ ಮಾಡಿ, ಸಾಧಕ ಭಾದಕಗಳನ್ನ ನೋಡಿ ಸರ್ಕಾರ ಅನುಮತಿ ಕೊಡುತ್ತದೆ ಎಂದರು.
ನಮ್ಮ ಕುಟುಂಬಕ್ಕೂ ಮಠಕ್ಕೂ ಅವಿನಾಭವ ಸಂಬಂಧವಿದೆ. ನಮ್ಮ ತಂದೆ ಹಾಗೂ ಹಿರಿಯ ಸ್ವಾಮೀಜಿಯವರ ಜೊತೆಗೆ ಇದ್ದಂತಹ ಸಂಬಂಧ ಯಾವಾಗಲೂ ಇರುತ್ತದೆ. ಈ ಸಂಬಂಧವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರು
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…