Featured

ತುಳುನಾಡಿನ ಹೆಮ್ಮೆಯ ಉದ್ಯಮಿ ಕೆ.ಪ್ರಕಾಶ್ ಶೆಟ್ಟಿ ಅವರ ಪ್ರಕಾಶಾಭಿನಂದನ ಕಾರ್ಯಕ್ರಮಕ್ಕೆ ಕ್ಷಣಗಣನೆ : ರಾಕಿಂಗ್ ಸ್ಟಾರ್ ಸೇರಿ ಹಲವು ಸ್ಟಾರ್ ನಟರ ಆಗಮನ- Vishwanews24

ಮಂಗಳೂರು: ತುಳುನಾಡಿನ ಹೆಮ್ಮೆಯ ಉದ್ಯಮಿ , ಅಪೂರ್ವ ಸಾಧಕ, ಕೊಡುಗೈ ದಾನಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಪ್ರಕಾಶ್ ಶೆಟ್ಟಿ ಅವರ ಪ್ರಕಾಶಾಭಿನಂದನ 60ರ ಸಂಭ್ರಮ ಇಂದು ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಸಿಟಿಯಲ್ಲಿ ಅದ್ಧೂರಿಯಾಗಿ ನೆರವೇರಲಿದೆ.

ಈಗಾಗಲೇ ಭರದ ಸಿದ್ಧತೆಗಳು ನಡೆದಿದ್ದು, ಕಾರ್ಯಕ್ರಮದ ಉದ್ಘಾಟಕರಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಸರಿಯಾಗಿ ಕಾರ್ಯಕ್ರಮ ಆರಂಭಗೊಳ್ಳಲಿದೆ. ಈಗಾಗಲೇ ಪ್ರಕಾಶಾಭಿನಂದನೆಗೆ ಅಧ್ಧೂರಿ ವೇದಿಕೆ ಸಿದ್ಧವಾಗಿದ್ದು, ಪ್ರಕಾಶ್ ಶೆಟ್ಟಿಯವರ ಅಭಿಮಾನಿಗಳು ಕಾರ್ಯಕ್ರಮ ಆರಂಭಕ್ಕೆ ಎದುರು ನೋಡುತ್ತಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಪ್ರಮುಖ ಆಕರ್ಷಕರಾಗಿ ಚಲನಚಿತ್ರ ನಟ ಕ್ರೇಜಿಸ್ಟಾರ್ ರವಿಚಂದ್ರನ್, ಹಾಗೆಯೇ ಕೆಜಿಎಫ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಭಾಗವಹಿಸಲಿದ್ದಾರೆ. ಈ ಮೂಲಕ ಕಾರ್ಯಕ್ರಮದ ಮೆರುಗನ್ನು ಈ ಇಬ್ಬರೂ ಸ್ಟಾರ್ ನಟರು ಹೆಚ್ಚಿಸಲಿದ್ದಾರೆ. ಜೊತೆಗೆ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ನೆರವೇರಲಿದೆ.

ಇನ್ನು ಸಂಗೀತ ದಿಗ್ಗಜ ಅರ್ಜುನ್ ಜನ್ಯ, ಹಾಗೆಯೇ ಖ್ಯಾತ ಸಿಂಗರ್ ವಿಜಯ್ ಪ್ರಕಾಶ್ ಅವರಿಂದ ಸಂಗೀತ ರಸಸಂಜೆ ನಡೆಯಲಿದೆ. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಾಕ್ಷಿಯಾಗಲಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago