Featured

ತುಳುನಾಡಿನ ಹೆಮ್ಮೆಯ ಕಂಬಳ ಹಾಗೂ ಯಕ್ಷಗಾನಕ್ಕೆ ಜಾಗತಿಕ ಮಟ್ಟದ ಪ್ರೋತ್ಸಾಹ : ಸಿ.ಟಿ.ರವಿ -Vishwanews24

ಮಂಗಳೂರು: ಕರಾವಳಿ, ಪಶ್ಚಿಮ ಘಟ್ಟ ಮತ್ತು ಪಾರಂಪರಿಕ ಪ್ರವಾಸೋದ್ಯಮ ಸಹಿತ ರಾಜ್ಯದಲ್ಲಿ 319 ಪ್ರವಾಸೋದ್ಯಮ ತಾಣಗಳು ಮತ್ತು 41 ಪ್ರವಾಸಿ ವಲಯಗಳನ್ನು ಗುರುತಿಸಲಾಗಿದ್ದು, ಮುಂದಿನ ವರ್ಷ ಸಮಗ್ರ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ.ರವಿ ಹೇಳಿದರು.

ಮಂಗಳೂರು ಪತ್ರಿಕಾ ಭವನದಲ್ಲಿ ಸೋಮವಾರ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಇಷ್ಟರ ತನಕ ಪ್ರವಾಸೋದ್ಯಮ ಅಭಿವೃದ್ಧಿಯನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿರಲಿಲ್ಲ. ಪ್ರಧಾನಿ ಮೋದಿ 9,500 ಕೋಟಿ ರೂ. ಈ ಕ್ಷೇತ್ರಕ್ಕೆ ಮೀಸಲಿಟ್ಟಿದ್ದಾರೆ. ಪ್ರವಾಸೋದ್ಯಮ ಸಚಿವನಾದ ಬಳಿಕ ಅಧ್ಯಯನ ನಡೆಸಲು ಕಳೆದ ಒಂದು ತಿಂಗಳಲ್ಲಿ 11 ಜಿಲ್ಲೆಗಳಿಗೆ ಭೇಟಿ ನೀಡಿದ್ದು, ಮುಂದಿನ ಬಜೆಟ್‌ಗೆ ಸಮಗ್ರ ವರದಿ ಸಲ್ಲಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದರು.

ತುಳುನಾಡಿನ ಹೆಮ್ಮೆಯ ಕಂಬಳ ಹಾಗೂ ಯಕ್ಷಗಾನವನ್ನು ಜಾಗತಿಕ ಮಟ್ಟದಲ್ಲಿ ಪ್ರೋತ್ಸಾಹ ಸಿಗುವಂತೆ ಮಾಡಲು ಪ್ರವಾಸೋದ್ಯಮ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಜಂಟಿಯಾಗಿ ಯೋಜನೆ ರೂಪಿಸಲಿವೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಸಿ.ಟಿ.ರವಿ, ಈ ಕುರಿತು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂಬಳಕ್ಕೆ ಜಾಗತಿಕವಾಗಿ ಹೆಚ್ಚಿನ ಪ್ರೋತ್ಸಾಹ ಸಿಗಬೇಕಿದೆ. ಇದರಿಂದ ಕರಾವಳಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ಸಿಗಲಿದೆ. ಕರಾವಳಿಯ ಹೆಮ್ಮೆಯ ಕಲೆ ಯಕ್ಷಗಾನವನ್ನೂ ಸೇರಿಸಿಕೊಳ್ಳಬಹುದು. ಅದೇ ರೀತಿ ಈ ಭಾಗದ ಇತರ ವಿಶೇಷತೆಗಳನ್ನೂ ಸೇರಿಸಿಕೊಳ್ಳಿ. ಕಲಾವಿದರು, ಸಂಸ್ಕೃತಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಕಾರ್ಯಕ್ರಮ ರೂಪಿಸಿ ಎಂದು ಸಚಿವರು ಸೂಚಿಸಿದರು.

ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪಣಂಬೂರು ಬೀಚ್ ಅಭಿವೃದ್ಧಿ ಸಮಿತಿ ಸಿಇಒ ಯತೀಶ್ ಬೈಕಂಪಾಡಿ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

10 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

14 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

15 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

15 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago