ಮಂಗಳೂರು: ಕರಾವಳಿ, ಪಶ್ಚಿಮ ಘಟ್ಟ ಮತ್ತು ಪಾರಂಪರಿಕ ಪ್ರವಾಸೋದ್ಯಮ ಸಹಿತ ರಾಜ್ಯದಲ್ಲಿ 319 ಪ್ರವಾಸೋದ್ಯಮ ತಾಣಗಳು ಮತ್ತು 41 ಪ್ರವಾಸಿ ವಲಯಗಳನ್ನು ಗುರುತಿಸಲಾಗಿದ್ದು, ಮುಂದಿನ ವರ್ಷ ಸಮಗ್ರ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ.ರವಿ ಹೇಳಿದರು.
ಮಂಗಳೂರು ಪತ್ರಿಕಾ ಭವನದಲ್ಲಿ ಸೋಮವಾರ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಇಷ್ಟರ ತನಕ ಪ್ರವಾಸೋದ್ಯಮ ಅಭಿವೃದ್ಧಿಯನ್ನು ಆದ್ಯತಾ ವಲಯವನ್ನಾಗಿ ಪರಿಗಣಿಸಿರಲಿಲ್ಲ. ಪ್ರಧಾನಿ ಮೋದಿ 9,500 ಕೋಟಿ ರೂ. ಈ ಕ್ಷೇತ್ರಕ್ಕೆ ಮೀಸಲಿಟ್ಟಿದ್ದಾರೆ. ಪ್ರವಾಸೋದ್ಯಮ ಸಚಿವನಾದ ಬಳಿಕ ಅಧ್ಯಯನ ನಡೆಸಲು ಕಳೆದ ಒಂದು ತಿಂಗಳಲ್ಲಿ 11 ಜಿಲ್ಲೆಗಳಿಗೆ ಭೇಟಿ ನೀಡಿದ್ದು, ಮುಂದಿನ ಬಜೆಟ್‌ಗೆ ಸಮಗ್ರ ವರದಿ ಸಲ್ಲಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದರು.
ತುಳುನಾಡಿನ ಹೆಮ್ಮೆಯ ಕಂಬಳ ಹಾಗೂ ಯಕ್ಷಗಾನವನ್ನು ಜಾಗತಿಕ ಮಟ್ಟದಲ್ಲಿ ಪ್ರೋತ್ಸಾಹ ಸಿಗುವಂತೆ ಮಾಡಲು ಪ್ರವಾಸೋದ್ಯಮ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಜಂಟಿಯಾಗಿ ಯೋಜನೆ ರೂಪಿಸಲಿವೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಸಿ.ಟಿ.ರವಿ, ಈ ಕುರಿತು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಂಬಳಕ್ಕೆ ಜಾಗತಿಕವಾಗಿ ಹೆಚ್ಚಿನ ಪ್ರೋತ್ಸಾಹ ಸಿಗಬೇಕಿದೆ. ಇದರಿಂದ ಕರಾವಳಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ಸಿಗಲಿದೆ. ಕರಾವಳಿಯ ಹೆಮ್ಮೆಯ ಕಲೆ ಯಕ್ಷಗಾನವನ್ನೂ ಸೇರಿಸಿಕೊಳ್ಳಬಹುದು. ಅದೇ ರೀತಿ ಈ ಭಾಗದ ಇತರ ವಿಶೇಷತೆಗಳನ್ನೂ ಸೇರಿಸಿಕೊಳ್ಳಿ. ಕಲಾವಿದರು, ಸಂಸ್ಕೃತಿ ತಜ್ಞರೊಂದಿಗೆ ಸಮಾಲೋಚನೆ ನಡೆಸಿ, ಕಾರ್ಯಕ್ರಮ ರೂಪಿಸಿ ಎಂದು ಸಚಿವರು ಸೂಚಿಸಿದರು.
ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಪಣಂಬೂರು ಬೀಚ್ ಅಭಿವೃದ್ಧಿ ಸಮಿತಿ ಸಿಇಒ ಯತೀಶ್ ಬೈಕಂಪಾಡಿ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…