Featured

ತುಳು ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಸಿಎಂಗೆ ಮನವಿ – vishwanews24

ತುಳು ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಸಿಎಂಗೆ ಮನವಿ

ಮಂಗಳೂರು: ಪ್ರಾದೇಶಿಕ ಚಲನ ಚಿತ್ರಗಳಿಗೆ ಸರಕಾರದಿಂದ ಸಬ್ಸಿಡಿ ನೀಡವಂತೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘ (ರಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಅವರು ಬೆಂಗಳೂರಿನಲ್ಲಿ ಮುಖ್ಯಂಮತ್ರಿಯವರಿಗೆ ಮನವಿ ನೀಡಿದ್ದಾರೆ.

ಕರ್ನಾಟಕದಲ್ಲಿ ವರ್ಷಂಪ್ರತಿ ಸುಮಾರು 15 ರಿಂದ 20 ತುಳು ಸಿನಿಮಾಗಳು ತೆರೆ ಕಾಣುತ್ತಿದೆ. ಪ್ರಾದೇಶಿಕ ಭಾಷೆಗಳ ಅಭಿಮಾನದಿಂದ ನಿರ್ಮಾಪಕರು ಚಲನ ಚಿತ್ರ ನಿರ್ಮಿಸುತ್ತಾರೆ. ಯಾವು ಪರಭಾಷೆಗೆ ಕಡಿಮೆ ಇಲ್ಲದಂತೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ಸಿನಿಮಾ ನಿರ್ಮಿಸುತ್ತಾರೆ. ಮೂರ್ನಾಲ್ಕು ಸಿನಿಮಾಗಳಿಗೆ ಮಾತ್ರ ಸಬ್ಸಿಡಿ ನೀಡುವ ರಾಜ್ಯ ಸರಕಾರ ಮುಂದಿನ ದಿನಗಳಲ್ಲಿ ಕನಿಷ್ಠ ಹದಿನೈದು ಸಿನಿಮಾಗಳಿಗೆ ಸಬ್ಸಿಡಿ ನೀಡುವಂತೆ ಮನವಿ ನೀಡಿದರು.

ನಿರ್ಮಾಪಕರ ಸಂಘಕ್ಕೆ ಕಟ್ಟಡ ನಿರ್ಮಿಸಲು ಜಾಗ ಮಂಜೂರಿಗೆ ಮನವಿ
ಇದೇ ವೇಳೆ ಮಂಗಳೂರಿನಲ್ಲಿ ತುಳು ಚಲನ ಚಿತ್ರ ನಿರ್ಮಾಪಕರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಜಮೀನು ಮಂಜೂರು ಮಾಡುವಂತೆ ಅಧ್ಯಕ್ಷ ಆರ್ ಧನರಾಜ್ ಮನವಿ ಮಾಡಿದರು.

ಸದ್ರಿ ಮಂಗಳೂರು ಹೋಬಳಿಯ ಕೊಡಿಯಾಲ್ ಬೈಲ್ ಎ ಗ್ರಾಮದ ಸರ್ವೆ ನಂಬ್ರ 1554 – 2 ಬಿ ಯಲ್ಲಿ ಖಾಲಿ ಜಮೀನು ಸರಕಾರದ ವಶದಲ್ಲಿದ್ದು, ಆ ಜಮೀನಿನಲ್ಲಿ ಐದು ಸೆಂಟ್ಸ್ ಜಾಗವನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿಮಿಸಲು ಜಾಗ ಮಂಜೂರು ಮಾಡಲು ಜಿಲ್ಲಾಧಿಕಾರಿಯವರಿಗೆ ಆದೇಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಲಾಯಿತು.

ತುಳು ಚಲನ ಚಿತ್ರ ನಿರ್ಮಾಪಕರ ಸಂಘ ನೀಡಿದ ಮನವಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದರು.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

19 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

19 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

19 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

22 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

22 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

22 hours ago