ಮಂಗಳೂರು: ಪಂಚ ದ್ರಾವಿಡ ಭಾಷೆಗಳಲ್ಲೊಂದಾದ ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ಸರಕಾರ ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಜೈ ತುಳುನಾಡು ಸೇರಿದಂತೆ ಇತರ ಸಂಘಟನೆಗಳು ಭಾನುವಾರ ಟ್ವೀಟ್ ಅಭಿಯಾನ ನಡೆಸಿದ್ದು, ಇದಕ್ಕೆ 2 ಲಕ್ಷಕ್ಕೂ ಅಧಿಕ ಮಂದಿ ಸ್ಪಂದಿಸಿ ಟ್ವೀಟ್ ಮಾಡಿದ್ದಾರೆ.
ತುಳು ಭಾಷೆಯ ಸ್ಥಾನಮಾನಕ್ಕಾಗಿ ಈ ಹಿಂದೆಯೂ ಹಲವು ಬಾರಿ ಟ್ವೀಟ್ ಅಭಿಯಾನ ನಡೆಸಿ ಕೇಂದ್ರ, ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ತುಳು ಭಾಷೆಯನ್ನು ರಾಜ್ಯ ಸರಕಾರ ಇನ್ನೂ ಅಧಿಕೃತ ಮಾನ್ಯತೆ ಪಡೆದ ಭಾಷೆಯಾಗಿ ಪರಿಗಣಿಸದ ಕಾರಣ ಕೇಂದ್ರದಲ್ಲೂಇದಕ್ಕೆ ಗ್ರೀನ್‌ಸಿಗ್ನಲ್ ಸಿಕ್ಕಿರಲಿಲ್ಲ. ಇದೀಗ ರಾಜ್ಯ ಸರಕಾರ ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಭಾನುವಾರ ಟ್ವೀಟ್ ಅಭಿಯಾನ ನಡೆಸಲಾಗಿದೆ.
ಗಣ್ಯರು, ಸೆಲೆಬ್ರಿಟಿಗಳ ಟ್ವೀಟ್
ರಾಜ್ಯ ಸರಕಾರ ತುಳುವಿಗೆ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಭಾನುವಾರ ನಡೆದ ಟ್ವೀಟ್ ಅಭಿಯಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಸುನಿಲ್ ಕುಮಾರ್, ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್, ಮಾಜಿ ಸಚಿವರ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ಯುವನಾಯಕ ಮಿಥುನ್ ರೈ, ಬಿಜೆಪಿ ಮುಖಂಡ ಬ್ರಿಜೇಶ್ ಚೌಟ, ಸೆಲೆಬ್ರಿಟಿಗಳಾದ ರೂಪೇಶ್ ಶೆಟ್ಟಿ, ಅರ್ಜುನ್ ಕಾಪಿಕಾಡ್, ಪೃಥ್ವಿ ಅಂಬರ್, ಚಿರಶ್ರೀ ಅಂಚನ್ ಟ್ವೀಟ್ ಮೂಲಕ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಇದು ಮಾತ್ರವಲ್ಲದೆ ಮಹಾರಾಷ್ಟ್ರ ಏಕೀಕರಣ ಮುಂಬಯಿ ಸಮಿತಿ, ಮಾಧ್ಯಮ ಸಂಸ್ಥೆಗಳು, ತೌಳವ ಅರಸು ವಂಶಸ್ಥರಾದ ಡಾ. ಆಕಾಶ್‌ರಾಜ್ ಜೈನ್, ಕಾಸರಗೋಡು ತುಳು ಅಭಿಮಾನಿಗಳ ಬಳಗ ಟ್ವೀಟ್‌ನಲ್ಲಿ ಪಾಲ್ಗೊಂಡಿವೆ.
ವರ್ಲ್ಡ್ ಟ್ರೆಂಡಿಂಗ್!
ಭಾನುವಾರ ಬೆಳಗ್ಗಿನಿಂದಲೇ ಟ್ವೀಟ್‌ಗಳ ಸರಮಾಲೆ ಆರಂಭವಾಗಿದ್ದವು. ಮಧ್ಯಾಹ್ನದ ವೇಳೆಗೆ ವರ್ಲ್ಡ್ ಟ್ರೆಂಡಿಂಗ್‌ನಲ್ಲಿ 6ನೇ ಸ್ಥಾನಕ್ಕೇರುವ ಮೂಲಕ ಜಗತ್ತಿನ ಗಮನ ಸೆಳೆದಿತ್ತು. ಸಂಜೆ ವೇಳೆಗೆ 1.77 ಲಕ್ಷ ಮಂದಿ ಟ್ವೀಟ್ ಮಾಡಿದ್ದರು. ಕಳೆದ ಸಲ ಅಭಿಯಾನ ನಡೆದಾಗ ಭಾರತದ ಟ್ರೆಂಡಿಂಗ್‌ನಲ್ಲಿ ನಂ.1 ಸ್ಥಾನದಲ್ಲಿತ್ತು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…