ಬೆಂಗಳೂರು: “ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು” ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಒತ್ತಾಯಿಸಿದರು.
ವಿಧಾನಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ತುಳು ನಾಡಿನ ಒಂದು ಕೋಟಿಗೂ ಹೆಚ್ಚು ಜನರು ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತುಳು ಭಾಷೆಯನ್ನು ಮಾನ್ಯತೆ ನೀಡಲು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು” ಎಂದು ಒತ್ತಾಯಿಸಿದರು.
“ತುಳು ನಾಡಿನಲ್ಲಿ ಕೊಂಕಣಿ, ಕ್ರೈಸ್ತ ಭಾಷೆ ಉರ್ದು ಮೊದಲಾದ ಭಾಷೆ ಮಾತನಾಡುವವರಿದ್ದಾರೆ. ಆದರೆ ಅವರೆಲ್ಲರೂ ತುಳು ನಾಡಿಗರು, ಅವರು ತುಳುವರು ಅವರೆಲ್ಲರಿಗೂ ತುಳು ಬರುತ್ತದೆ. ತುಳು ನಾಡಿನ ಜನಪದ ಕ್ರೀಡೆ ಕಂಬಳದಂತವು ವಿಶ್ವವಿಖ್ಯಾತಿಯನ್ನು ಹೊಂದಿದೆ. ಇಂತಹ ತುಳು ನಾಡಿದ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ರಾಜ್ಯ ಸರ್ಕಾರದಲ್ಲಿ ಮೊದಲು ಈ ಒತ್ತಾಯ ಅಂಗೀಕಾರವಾಗಬೇಕು. ಹಾಗೂ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು” ಎಂದು ಹೇಳಿದರು.
ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಅಂಗೀಕಾರ ಮಾಡಬೇಕು ಎಂದು ಹೇಳಿದ ಅವರು ಮಾತಿನ ಅಂತ್ಯದಲ್ಲಿ ಎಲ್ಲರಿಗೂ ನಮಸ್ಕಾರ (ಮಾತೆರೆಗ್ಲಾ ನಮಸ್ಕಾರ) ಎಂದು ತುಳು ಬಾಷೆಯಲ್ಲಿ ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…