ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು : ವಿಧಾನಸಭೆಯಲ್ಲಿ ಉಮಾನಾಥ್‌ ಕೋಟ್ಯಾನ್‌- Vishwanews24

ಬೆಂಗಳೂರು: “ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು” ಮೂಡುಬಿದಿರೆ ಶಾಸಕ ಉಮಾನಾಥ್‌ ಕೋಟ್ಯಾನ್‌ ಅವರು ಒತ್ತಾಯಿಸಿದರು.

ವಿಧಾನಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿದ ಅವರು, “ತುಳು ನಾಡಿನ ಒಂದು ಕೋಟಿಗೂ ಹೆಚ್ಚು ಜನರು ತುಳು ಭಾಷೆಗೆ ಮಾನ್ಯತೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತುಳು ಭಾಷೆಯನ್ನು ಮಾನ್ಯತೆ ನೀಡಲು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು” ಎಂದು ಒತ್ತಾಯಿಸಿದರು.

“ತುಳು ನಾಡಿನಲ್ಲಿ ಕೊಂಕಣಿ, ಕ್ರೈಸ್ತ ಭಾಷೆ ಉರ್ದು ಮೊದಲಾದ ಭಾಷೆ ಮಾತನಾಡುವವರಿದ್ದಾರೆ. ಆದರೆ ಅವರೆಲ್ಲರೂ ತುಳು ನಾಡಿಗರು, ಅವರು ತುಳುವರು ಅವರೆಲ್ಲರಿಗೂ ತುಳು ಬರುತ್ತದೆ. ತುಳು ನಾಡಿನ ಜನಪದ ಕ್ರೀಡೆ ಕಂಬಳದಂತವು ವಿಶ್ವವಿಖ್ಯಾತಿಯನ್ನು ಹೊಂದಿದೆ. ಇಂತಹ ತುಳು ನಾಡಿದ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ರಾಜ್ಯ ಸರ್ಕಾರದಲ್ಲಿ ಮೊದಲು ಈ ಒತ್ತಾಯ ಅಂಗೀಕಾರವಾಗಬೇಕು. ಹಾಗೂ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು” ಎಂದು ಹೇಳಿದರು.

ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಅಂಗೀಕಾರ ಮಾಡಬೇಕು ಎಂದು ಹೇಳಿದ ಅವರು ಮಾತಿನ ಅಂತ್ಯದಲ್ಲಿ ಎಲ್ಲರಿಗೂ ನಮಸ್ಕಾರ (ಮಾತೆರೆಗ್ಲಾ ನಮಸ್ಕಾರ) ಎಂದು ತುಳು ಬಾಷೆಯಲ್ಲಿ ಹೇಳಿದರು.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

3 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

3 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

3 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago