ನವದೆಹಲಿ: ತುಳು ಭಾಷೆಯನ್ನು ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ.
ಗೃಹ ಸಚಿವಾಲಯದ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಲೋಕಸಭೆ ಸಂಸದ ರಾಜಮೋಹನ್ ಉನ್ನಿತಾನ್ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಸದ್ಯದಲ್ಲಿಯೇ ಯಾವುದೇ ಸೇರ್ಪಡೆಯ ಯೋಜನೆಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜಮೋಹನ್ ಉನ್ನಿತ್ತಾನ್ ಅವರು ತುಳು ಭಾಷೆಯನ್ನು 8 ನೇ ಶೆಡ್ಯೂಲ್‌ಗೆ ಸೇರಿಸುವ ಬಗ್ಗೆ ಸರ್ಕಾರದ ನಿಲುವನ್ನು ಕೇಳಿದ್ದರು. ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಸಚಿವರು ‘ಡಾ. ಸೀತಾಕಾಂತ್ ಮೊಹಾಪಾತ್ರ ಸಮಿತಿಯು ಎಂಟನೇ ಶೆಡ್ಯೂಲ್‌ನಲ್ಲಿರುವ ಭಾಷೆಗಳನ್ನು ಒಕ್ಕೂಟದ ಅಧಿಕೃತ ಭಾಷೆಗಳಾಗಿ ಗುರುತಿಸುವ ಬಗ್ಗೆ ಯಥಾಸ್ಥಿತಿಯನ್ನು ಮುಂದುವರಿಸಬೇಕು ಎಂದು ಶಿಫಾರಸು ಮಾಡಿತ್ತು. ಪ್ರಸ್ತುತ, ಅಧಿಕೃತ ಭಾಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಪ್ರಾಯೋಗಿಕ ಅಥವಾ ಆಡಳಿತಾತ್ಮಕವಾಗಿ ಕಾರ್ಯಸಾಧ್ಯವಲ್ಲ” ಎಂದು ಹೇಳಿಕೆ ನೀಡಿದ್ದಾರೆ.
ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಬೇಡಿಕೆಗಳು ಕಾಲಕಾಲಕ್ಕೆ ಬಂದಿವೆ. ಉಪಭಾಷೆಗಳು ಮತ್ತು ಭಾಷೆಗಳ ವಿಕಾಸವು ಒಂದು ಕ್ರಿಯಾತ್ಮಕ ಪ್ರಕ್ರಿಯೆಯಾಗಿದೆ. ಇದು ಸಾಮಾಜಿಕ- ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಳಿಂದ ಪ್ರಭಾವಿತವಾಗಿರುವುದರಿಂದ ಭಾಷೆಗಳಿಗೆ ಯಾವುದೇ ಮಾನದಂಡಗಳನ್ನು ನಿಗದಿಪಡಿಸುವುದು ಕಷ್ಟ,” ಅಂತಾ ಹೇಳಿದ್ದಾರೆ. “ಭಾಷೆಗಳನ್ನು ಉಪಭಾಷೆಗಳಿಂದ ಪ್ರತ್ಯೇಕಿಸುವುದೋ ಅಥವಾ ಎಂಟನೇ ಅನುಸೂಚಿಯಲ್ಲಿ ಸಂವಿಧಾನಕ್ಕೆ ಸೇರಿಸುವುದು ಎನ್ನುವ ನಿಷ್ಕರ್ಷೆಗೆ ಬರುವುದು ಕಷ್ಟ ಸಾದ್ಯವಾಗಿದೆ,” ಅಂತಾ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…