Featured

ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಸದನದಲ್ಲಿ ಕರಾವಳಿ ಶಾಸಕರ ಆಗ್ರಹ – Vishwanews24

ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಸದನದಲ್ಲಿ ಕರಾವಳಿ ಶಾಸಕರ ಆಗ್ರಹ

ಬೆಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಕರಾವಳಿಯ ಶಾಸಕರು ಒಗ್ಗಟ್ಟಾಗಿ ಆಗ್ರಹಿಸಿದ್ದು, ಇದಕ್ಕೆ ಸ್ವೀಕರ್ ಯು.ಟಿ. ಖಾದರ್‌ ಕೂಡ ಧ್ವನಿಗೂಡಿಸಿದ್ದಾರೆ.

ವಿಧಾನಸಭೆಯಲ್ಲಿ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್‌ನ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ, 1994ರಲ್ಲಿ ಡಾ. ಎಂ. ವೀರಪ್ಪ ಮೊಲಿ ಅವರು ಸಿಎಂ ಆಗಿದ್ದಾಗ ತುಳು ಅಕಾಡೆಮಿ ಸ್ಥಾಪಿಸಿದ್ದು, ಕೇರಳದಲ್ಲಿ ಕೂಡ ತುಳು ಭಾಷಾ ಅಕಾಡೆಮಿ ಇದೆ. ಅಮೆರಿಕ ವಿಶ್ವವಿದ್ಯಾಲಯದಲ್ಲಿ ತುಳು ಭಾಷೆಯಲ್ಲಿ ಅರ್ಜಿ ನಮೂನೆ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕದಲ್ಲಿ ತುಳು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಇದಕ್ಕೆ ಬೆಂಬಲ ಸೂಚಿಸಿರುವ ಬಿಜೆಪಿ ಶಾಸಕ ವೇದವ್ಯಾಸ ಕಾಮತ್‌, ನಮ್ಮ ಸರಕಾರ ಇದ್ದಾಗ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಎಲ್ಲ ಪ್ರಕ್ರಿಯೆಗಳನ್ನೂ ಪೂರೈಸಿತ್ತು. ಈಗಿನ ಸರಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡರೆ ಇದು ಸಾಧ್ಯವಾಗಲಿದೆ ಎಂದು ಗಮನ ಸೆಳೆದರು.

ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆ ಮಾಡಲು ಆರ್ಥಿಕ ಹೊಣೆಗಾರಿಕೆಯೂ ಬರುವುದಿಲ್ಲ ಎನ್ನುತ್ತಾ ಅಶೋಕ್ ರೈ ಅವರು ತುಳುವಿನಲ್ಲೇ ಮಾತು ಪ್ರಾರಂಭಿಸಿದ್ದು, ಮಧ್ಯಪ್ರವೇಶಿಸಿದ ವೇದವ್ಯಾಸ ಕಾಮತ್‌ ಸಹ ತುಳು ಭಾಷೆಯಲ್ಲೇ ಮಾತನಾಡಿದರು.

ಇದಕ್ಕೆ ತುಳುವಿನಲ್ಲೇ ಉತ್ತರಿಸಿದ ಸ್ಪೀಕರ್‌ ಖಾದರ್‌, ನೀವು ಹೇಳಬೇಕಾದ್ದನ್ನು ಹೇಳಿದ್ದೀರಿ. ಎಲ್ಲವನ್ನೂ ಕೇಳಿಯಾಗಿದೆ. ಸರಕಾರ ಉತ್ತರ ಕೊಡುತ್ತದೆ ಎಂದಿದ್ದಾರೆ.

ಸಚಿವ ಶಿವರಾಜ್‌ ತಂಗಡಗಿ ಉತ್ತರಿಸಿ, ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಸಂಬಂಧ ಅಧ್ಯಯನ ನಡೆಸಲು ಡಾ| ಮೋಹನ ಆಳ್ವ ಅಧ್ಯಕ್ಷತೆಯಲ್ಲಿ 2023 ರ ಜ. 12ರಂದು ಸಮಿತಿ ರಚಿಸಲಾಗಿದ್ದು, ಸಮಿತಿಯ ವರದಿ ಬಂದಿದೆ. ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ಮುಂದುವರಿಯಬಹುದು ಎಂದು ಶಿಫಾರಸು ಮಾಡಿದೆ. ಸರಕಾರ ಕೂಡ ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿಯೇ ಇದೆ. ವಿವಿಧ ಇಲಾಖೆಗಳ ಅಭಿಪ್ರಾಯ ಪಡೆದು ಮುಂದಿನ ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago