ತುಳು ಭಾಷೆಯನ್ನು 8ನೇ ಪರಿಚ್ಛೇದದಲ್ಲಿ ಸೇರಿಸಲು ಅಗತ್ಯ ತೀರ್ಮಾನ ತೆಗೆದುಕೊಳ್ಳಲು ಇದು ಸಕಾಲ : ಸಿ.ಟಿ.ರವಿ -Vishwanews24

ತುಳು ಭಾಷೆಯನ್ನು 8ನೇ ಪರಿಚ್ಛೇದದಲ್ಲಿ ಸೇರಿಸಲು ಅಗತ್ಯ ತೀರ್ಮಾನ ತೆಗೆದುಕೊಳ್ಳಲು ಇದು ಸಕಾಲ..

ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸಲು ತುಳುನಾಡಿನ ಜನರ ಪರವಾಗಿ ಮುಖ್ಯಮಂತ್ರಿಗೆ ಮನವಿ ಮಾಡಿಕೊಳ್ಳುತ್ತೇನೆ..: : ಸಿ.ಟಿ.ರವಿ

ಬೆಂಗಳೂರು : ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಿ.ಟಿ.ರವಿ ಅವರು ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಘೋಷಿಸಬೇಕೆಂದು ಅಲ್ಲಿನ ಜನ, ಜನಪ್ರತಿನಿಧಿಗಳ ಮನವಿ. ಬೇಡಿಕೆಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ನಾನು ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಅವರು ಅವರಲ್ಲಿ ತುಳುನಾಡಿನ ಜನರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ. ತುಳುವನ್ನು 8ನೇ ಪರಿಚ್ಛೇದದಲ್ಲಿ ಸೇರಿಸಲು ಅಗತ್ಯ ತೀರ್ಮಾನ ತೆಗೆದುಕೊಳ್ಳಲು ಇದು ಸಕಾಲ” ಎಂದು ಹೇಳಿದ್ದಾರೆ.

ಹಾಗೆಯೇ ಈ ಟ್ವೀಟ್‌ನಲ್ಲಿ ಮನವಿಯ ಪ್ರತಿಯನ್ನು ಕೂಡಾ ಲಗತ್ತಿಸಿದ್ದಾರೆ.

ಈ ಮನವಿ ಪತ್ರದಲ್ಲಿ ಕನ್ನಡದ ಸಹೋದರ ಭಾಷೆಯಲ್ಲಿ ಒಂದಾದ ತುಳು ಭಾಷೆಯನ್ನು ಉಳಿಸಿ ಬೆಳೆಸಲು ತುಳುನಾಡಿಗರು ಅಭಿಮಾನದಿಂದ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ಅಗತ್ಯವಿರುವ ನೆರವು ನೀಡುವುದು ಹಿರಿಯಣ್ಣನ ಆದ್ಯ ಕರ್ತವ್ಯ ಎಂದು ಬರೆಯಲಾಗಿದೆ.

ಹಾಗೆಯೇ ಕೊನೆಯಲ್ಲಿ ಭಾರತ್‌ ಮಾತಾ ಕಿಜೈ, ಜೈ ಕನ್ನಡಾಂಬೆ, ತುಳು ನಾಡಿಗರ ಹೋರಾಟಕ್ಕೆ ಜಯವಾಗಲಿ ಎಂದು ಉಲ್ಲೇಖಿಸಲಾಗಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

22 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

22 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

23 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago