ಬೆಂಗಳೂರು : ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಿ.ಟಿ.ರವಿ ಅವರು ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಘೋಷಿಸಬೇಕೆಂದು ಅಲ್ಲಿನ ಜನ, ಜನಪ್ರತಿನಿಧಿಗಳ ಮನವಿ. ಬೇಡಿಕೆಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ನಾನು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಅವರಲ್ಲಿ ತುಳುನಾಡಿನ ಜನರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ. ತುಳುವನ್ನು 8ನೇ ಪರಿಚ್ಛೇದದಲ್ಲಿ ಸೇರಿಸಲು ಅಗತ್ಯ ತೀರ್ಮಾನ ತೆಗೆದುಕೊಳ್ಳಲು ಇದು ಸಕಾಲ” ಎಂದು ಹೇಳಿದ್ದಾರೆ.
ಹಾಗೆಯೇ ಈ ಟ್ವೀಟ್‌ನಲ್ಲಿ ಮನವಿಯ ಪ್ರತಿಯನ್ನು ಕೂಡಾ ಲಗತ್ತಿಸಿದ್ದಾರೆ.
ಈ ಮನವಿ ಪತ್ರದಲ್ಲಿ ಕನ್ನಡದ ಸಹೋದರ ಭಾಷೆಯಲ್ಲಿ ಒಂದಾದ ತುಳು ಭಾಷೆಯನ್ನು ಉಳಿಸಿ ಬೆಳೆಸಲು ತುಳುನಾಡಿಗರು ಅಭಿಮಾನದಿಂದ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ಅಗತ್ಯವಿರುವ ನೆರವು ನೀಡುವುದು ಹಿರಿಯಣ್ಣನ ಆದ್ಯ ಕರ್ತವ್ಯ ಎಂದು ಬರೆಯಲಾಗಿದೆ.
ಹಾಗೆಯೇ ಕೊನೆಯಲ್ಲಿ ಭಾರತ್ ಮಾತಾ ಕಿಜೈ, ಜೈ ಕನ್ನಡಾಂಬೆ, ತುಳು ನಾಡಿಗರ ಹೋರಾಟಕ್ಕೆ ಜಯವಾಗಲಿ ಎಂದು ಉಲ್ಲೇಖಿಸಲಾಗಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…