ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು : ಬಿ.ಕೆ ಹರಿಪ್ರಸಾದ್‌ – Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ಸರಕಾರವು ಕರ್ನಾಟಕದಲ್ಲಿ ಮೂಲೆ ಗುಂಪಾಗಿರುವ ತುಳು,ಕೊಡವ ಭಾಷೆಗಳ ಮೇಲೆ  ಮಮತೆ ತೋರಿಸಲಿ..

ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು..

ಬೆಂಗಳೂರು: ಬಿಜೆಪಿ ಸರಕಾರವು ರಾಜ್ಯದ ಕೇವಲ ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಮಮತೆಯನ್ನು ನಮ್ಮ ಕರ್ನಾಟಕದಲ್ಲಿ ಮೂಲೆ ಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್‌ ನಾಯಕ ಹಾಗೂ ವಿಧಾನಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, 2011 ರ ಜನಗಣತಿಯ ಪ್ರಕಾರ ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427 ಹಾಗೆಯೇ ಕೊಡವ ಭಾಷೆ ಮಾತನಾಡುವವರ ಸಂಖ್ಯೆ 1,13,857. ಆದರೆ ಸಂಸ್ಕೃತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ 24,821 ಮಾತ್ರ. ಇಷ್ಟು ಕಡಿಮೆ ಜನಸಂಖ್ಯೆಯ ಮೇಲೆ ಬಿಜೆಪಿ ಸರಕಾರ ಮಮತೆ ತೋರಿಸುತ್ತಾ ಬಂದಿದೆ ಎಂದು ಆರೋಪಿಸಿದ್ದಾರೆ.

ಚಿಕ್ಕಮಗಳೂರು : ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ : ಸ್ಥಳದಲ್ಲೇ ಇಬ್ಬರು ಸಾವು, ಮತ್ತಿಬ್ಬರು ಗಂಭೀರ – Vishwanews24

ಇನ್ನು ಈಗಾಗಲೇ ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯವಿದ್ದು, ಅದಕ್ಕೆ ಬೇಕಾದಂತಹ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಆದರೆ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ತುಳು ಮತ್ತು ಕೊಡವ ಭಾಷೆಗಳ ಅಭಿವೃದ್ದಿಯತ್ತ ಸರ್ಕಾರ ನಿರ್ಲಕ್ಷವನ್ನು ತೋರಿಸುತ್ತಿದೆ ಎಂದಿದ್ದಾರೆ.

ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಗಳಾದ ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

 ರಾಜ್ಯದಲ್ಲಿ ಕೊರೊನಾ ಮತ್ತು ಲಸಿಕೆ ಸ್ಥಿತಿಯ ಕುರಿತು ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ – Vishwanews24

Leave a Reply